ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು (OMC) ಇಂದಿನಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ ಪಿಜಿ (LPG) ಸಿಲಿಂಡರ್‌ನ ಬೆಲೆಯನ್ನು ಸುಮಾರು ₹135 ರೂ.ಗಳಷ್ಟು ಕಡಿತಗೊಳಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿ 2355.50 ರೂ.ಗಳಿದ್ದ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ ಈಗ ₹2219.00 ರೂ.ಗಳಿಗೆ ಇಳಿದಿದೆ.
ಮುಂಬೈನಲ್ಲಿ, ವಾಣಿಜ್ಯ ಎಲ್‌ಪಿಜಿ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ Rs 2,307 ರಿಂದ ₹ 2171.50 ಕ್ಕೆ ಇಳಿಸಲಾಗಿದೆ.

ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ ₹ 2,455 ರ ಬದಲಿಗೆ ₹ 2,322 ಇಳಿಕೆಯಾಗಿದೆ. ಚೆನ್ನೈನಲ್ಲಿ ₹2,508 ಬದಲಿಗೆ ₹2373 ಇಳಿಕೆ ಕಂಡಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಮೇ 19 ರಂದು 14 ಕೆಜಿ ಗೃಹಬಳಕೆಯ ಸಿಲಿಂಡರ್‍ನ ದರವನ್ನು 3.50 ರೂ. ಹೆಚ್ಚಿಸಲಾಗಿತ್ತು ಮತ್ತು 19 ಕೆಜಿಯ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು 8 ರೂ. ಹೆಚ್ಚಿಸಲಾಗಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆಬದಿ ರೋಲ್‌ ಮಾರುವ 10 ವರ್ಷದ ಬಾಲಕನ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ; ಸ್ಫೂರ್ತಿಯೂ ಹೌದು; ಸಹಾಯ ಮಾಡುವೆ ಎಂದ ಆನಂದ ಮಹೀಂದ್ರಾ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement