ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮನೆಗೆ ಮುತ್ತಿಗೆ : ಕೆಲ ಎನ್‌ಎಸ್‌ಯುಐ ಕಾರ್ಯಕರ್ತರ ಬಂಧನ

ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ ಮನೆ ಮೇಲೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದವರು ಮುತ್ತಿಗೆ ಹಾಕಿ ಗದ್ದಲ ನಡೆಸಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮನೆಗೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಿಗೆ ಹಾಕಿದ್ದ ಕೆಲ ಎನ್‌ಎಸ್‌ಯುಐ ಕಾರ್ಯಕರ್ತರನ್ನು ತಿಪಟೂರು ಪೊಲೀಸರು ಬಂಧಿಸಿದ್ದಾರೆ.
ಇಂದು, ಬುಧವಾರ ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವರು, ಬಿ.ಸಿನಾಗೇಶ್ ಮನೆ ಮೇಲೆ ಎನ್‍ಎಸ್‍ಯುಐಯವರು ದಾಂಧಲೆ ಮಾಡಿದ್ದಾರೆ. ಮನೆ ಬಳಿ ಬೆಂಕಿ ಹಚ್ಚುವ ಕೆಲಸ ಕೂಡ ಮಾಡಿದ್ದಾರೆ. ಇದು ಎನ್‍ಎಸ್‍ಯುಐ ಗೂಂಡಾ ವರ್ತನೆ. ಅದಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ ಮನೆಗೆ ಮುತ್ತಿಗೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ ಇವತ್ತು ಮಧ್ಯಾಹ್ನ ಬಿಸಿ ನಾಗೇಶ್ ಅವರ ಮನೆಗೆ ಕಾಂಗ್ರೆಸ್ ಕೆಲ ಕಾರ್ಯಕರ್ತರು ಮನೆಗೆ ನುಗ್ಗಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ನಾಗೇಶ್ ಮನೆಗೆ ಬೆಂಕಿ ಹಾಕೋದಿಕ್ಕೆ ಮುಂದಾಗಿದ್ದರು. ಈಗಾಗಲೇ 15 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಎರಡು ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ರೀತಿಯಾದ ಗುಂಡಾ ವರ್ತನೆ ನಮ್ಮಲ್ಲಿ ನಡೆಯಲ್ಲ ಎಂದು ಕಿಡಿ ಕಾರಿದ್ದಾರೆ.
ಈ ಪ್ರಕರಣದ ಹಿಂದೆ ಯಾರಿದ್ದಾರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಬೆಂಗಳೂರಿಂದ ಐವರು ದಾವಣಗೆರೆಯಿಂದ ಮೂವರು, ಹಾಸನದಿಂದ ಒಬ್ಬರು, ತುಮಕೂರಿನಿಂದ ಒಬ್ಬರು‌ ಎನ್‌ಎಸ್‌ಐಯು ಮುಖಂಡರು ಬಂದಿದ್ದಾರೆ. ಪೂರ್ವಯೋಜನೆ ಮಾಡಿಕೊಂಡೇ ಬಂದಿದ್ದಾರೆ. ಪೊಲೀಸರು ಕಾನೂನಿನ ಪಾಠ ಮಾಡ್ತಾರೆ. ಯಾರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement