ಕಾಶ್ಮೀರದಲ್ಲಿ ಗುಂಡಿಕ್ಕಿ ಬ್ಯಾಂಕ್ ಮ್ಯಾನೇಜರ್ ಹತ್ಯೆ: ಮುಂದಿವರಿದ ಹಿಂದೂಗಳ ಮೇಲಿನ ಉದ್ದೇಶಿತ ಹಿಂಸಾಚಾರ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ಹತ್ಯೆಗೈದ ಮತ್ತೊಂದು ಘಟನೆಯಲ್ಲಿ, ಜೂನ್ 2, ಗುರುವಾರದಂದು ಕುಲ್ಗಾಮ್‌ನಲ್ಲಿ ರಾಜಸ್ಥಾನದ ಬ್ಯಾಂಕ್ ಮ್ಯಾನೇಜರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅರೆ, ಮೋಹನ್ ಪೋರಾದಲ್ಲಿರುವ ಎಲ್ಲಕ್ವೈ ದೇಹತಿ ಬ್ಯಾಂಕ್‌ನಲ್ಲಿ ಮ್ಯಾನೇಜರ್‌ ಆಗಿದ್ದ ವಿಜಯಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ರಾಜಸ್ಥಾನದ ಹನುಮಾನ್‌ಗಢ ಮೂಲದ ವಿಜಯಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಷ್ಟರಲ್ಲಾಗಲೇ ಅವರು ಸಾವಿಗೀಡಾಗಿದ್ದರು.
ಶೋಪಿಯಾನ್‌ನಿಂದ ಕೇವಲ 13 ಕಿಮೀ ದೂರದಲ್ಲಿ ಈ ಘಟನೆ ಸಂಭವಿಸಿದ್ದು, ಗುರುವಾರ ಬೆಳಗ್ಗೆ ಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗೋಪಾಲ್ಪೋರಾ ಪ್ರದೇಶದಲ್ಲಿ ಹಿಂದೂ ಮಹಿಳೆಯೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ರಜನಿ ಬಾಲಾ ಎಂಬ ಮಹಿಳೆ ಶಾಲಾ ಶಿಕ್ಷಕಿ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ತಮ್ಮ ಪತಿ ಮತ್ತು ಮಗಳೊಂದಿಗೆ ಜಮ್ಮು ವಿಭಾಗದ ಸಾಂಬಾದಲ್ಲಿ ವಾಸಿಸುತ್ತಿದ್ದರು.
ವಿಜಯಕುಮಾರ್ ಹತ್ಯೆಯು ಕಾಶ್ಮೀರದಲ್ಲಿ ನಡೆದ ಉದ್ದೇಶಿತ ಹತ್ಯೆಗಳ ಸರಣಿಯಲ್ಲಿ ಇತ್ತೀಚಿನದು. ಕಳೆದ ವಾರ, ಬುದ್ಗಾಮ್‌ನ ಚದೂರ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಟಿವಿ ಕಲಾವಿದೆ ಅಮ್ರೀನ್ ಭಟ್ ಸಾವಿಗೀಡಾಗಿದ್ದರು. ಮೇ 12 ರಂದು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರ ರಾಹುಲ್ ಭಟ್ ಅವರನ್ನು ಉಗ್ರರು ಹತ್ಯೆ ಮಾಡಿದ್ದರು.

ಪ್ರಮುಖ ಸುದ್ದಿ :-   ಕುಖ್ಯಾತ ಗ್ಯಾಂಗ್‌ಸ್ಟರ್‌-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement