ಜೂನ್ 4ರಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರಲು ಹಿಂದೂಪರ ಸಂಘಟನೆಗಳು ಮುಂದಾಗಿವೆ. ಅಲ್ಲದೆ, ಜೂನ್ 4ರಂದು ಶ್ರೀರಂಗಪಟ್ಟಣ ಚಲೋಕ್ಕೆ ಕರೆ ನೀಡಿವೆ. ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಈ ದೇವಸ್ಥಾನದ ಮೇಲೆ ಟಿಪ್ಪು ಸುಲ್ತಾನ್ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾರೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ ಎಂದು ಹಿಂದೂ ಸಂಘಟನೆಗಳು ಪ್ರತಿಪಾದನೆ ಮಾಡುತ್ತಿವೆ.

ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಎಚ್‌ಪಿ ಮನವಿ ಸಲ್ಲಿಸಿತ್ತು. ಜಿಲ್ಲಾಧಿಕಾರಿಗಳು ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಎಚ್‌ಪಿ ಹಾಗೂ ಬಜರಂಗ ದಳದ ಪದಾಧಿಕಾರಿಗಳು ಜೂನ್ 4ರಂದು ಶ್ರೀರಂಗಪಟ್ಟಣ ಚಲೋಕ್ಕೆ ಕರೆ ನೀಡಿದ್ದಾರೆ.
ಜೂನ್ 4 ರಂದು ಶ್ರೀರಂಗಪಟ್ಟಣ ಚಲೋ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಹಾಕಲಾಗಿದ್ದು, ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಸೀದಿಯ ಸುತ್ತ ಬಿಗಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement