ಹಾಸನ: ಮಾರಕಾಸ್ತ್ರಗಳಿಂದ ನಗರಸಭಾ ಸದಸ್ಯನ ಬರ್ಬರ ಕೊಲೆ

posted in: ರಾಜ್ಯ | 0

ಹಾಸನ: ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ಆಟೋದಲ್ಲಿ ಬಂದ ದುಷ್ಕರ್ಮಿಗಳು ನಗರಸಭಾ ಸದಸ್ಯನನ್ನು ಬರ್ಬರ ಕೊಲೆ ಮಾಡಿದ್ದಾರೆ.
ಹಾಲಿ ನಗರಸಭಾ ಸದಸ್ಯರಾದ ಪ್ರಶಾಂತ ನಾಗರಾಜ (42) ಕೊಲೆಯಾದವರು. ಇವರು ಲಕ್ಷ್ಮಿಪುರ ಬಡಾವಣೆಯ ಜವೇನಹಳ್ಳಿ ಮಠದ ಬಳಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಆಟೋದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಪ್ರಶಾಂತ ನಾಗರಾಜ ಅವರ ದಾಳಿ ಮಾಡಿ ಎದೆಗೆ ಬಡಿದು ಗಾಯಗೊಳಿಸಿ ಎಡಗೈ ತುಂಡರಿಸಿದ್ದಲ್ಲದೆ ಕೊಚ್ಚಿ ಪರಾರಿಯಾಗಿದ್ದಾರೆ. ಪ್ರಶಾಂತ ನಾಗರಾಜ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವ ಗೊಂಡು ಮೃತಪಟ್ಟಿದ್ದಾರೆ.

advertisement

ಬಳಿಕ ಸ್ಥಳಕ್ಕೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಸೇರಿದಂತೆ ಶ್ವಾನದಳದವರು ಭೇಟಿ ನೀಡಿ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಪ್ರಶಾಂತ ಅವರ ಸ್ನೇಹಿತರ ಮತ್ತು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಮೇಲ್ನೋಟಕ್ಕೆ ಕೊಲೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ನಡೆದಿರಬಹುದೆಂದು ಶಂಕಿಸಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ.
ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಾಜಿ ಸಚಿವ ಎಚ್ ಡಿ ರೇವಣ್ಣ ಆಸ್ಪತ್ರೆಗೆ ಆಗಮಿಸಿದ್ದರು. ದುಷ್ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಬೇಕೆಂದು ಮಾಜಿ ಸಚಿವ ರೇವಣ್ಣ ಆಗ್ರಹಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಬೆಳಗಾವಿ ನಂತರ ಈಗ ಮೂಡಲಗಿಯ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement