ಕರ್ನಾಟಕದಲ್ಲಿ ಕೊರೋನಾ ದಿಢೀರ್ ಹೆಚ್ಚಳ: ಗುರುವಾರ 297 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಗುರುವಾರ) 297 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ ಇಂದು ಕೊರೊನಾದಿಂದ ಸಾವು ವರದಿಯಾಗಿಲ್ಲ
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,952,577ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು,ಗುರುವಾರ 276 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,788,151ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು, ಗುರುವಾರ 187 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,910,359ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 2,204 ಸಕ್ರಿಯ ಪ್ರಕರಣಗಳಿವೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ

ನಿಮ್ಮ ಕಾಮೆಂಟ್ ಬರೆಯಿರಿ

advertisement