ಮೈಕ್‌ನಲ್ಲಿ ಆಜಾನ್: ಜೂನ್‌ 8ರಂದು ರಾಜ್ಯದ ಬಿಜೆಪಿ ಶಾಸಕರ ಕಚೇರಿ ಮುಂದೆ ಪ್ರತಿಭಟನೆ

ಹುಬ್ಬಳ್ಳಿ: ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‍ಗಳನ್ನು ತೆರವುಗೊಳಿಸದ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ ಸಾರಿದ್ದು, ತೆರವು ಮಾಡದಿರುವುದನ್ನು ಖಂಡಿಸಿ ಜೂ.8 ರಂದು ರಾಜ್ಯದ ಎಲ್ಲಾ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ ನಿಷೇಧ ಮಾಡಿ ಆದೇಶ ಹೊರಡಿಸಿ ಹಲವು ದಿನಗಳು ಕಳೆದಿವೆ. ಆದರೆ, ಸುಪ್ರೀಂ ಕೋರ್ಟ್ ಆದೇಶ ಇದುವರೆಗೆ ಪಾಲನೆ ಆಗುತ್ತಿಲ್ಲ. ಸುಪ್ರಿಂ ಕೋರ್ಟ್ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ಬೆಳ್ಳಂಬೆಳಗ್ಗೆ ಮಸೀದಿಗಳ ಮೇಲೆ ಮೈಕ್ ಶಬ್ದ ಶುರುವಾಗುತ್ತದೆ. ಇದು ನ್ಯಾಯಾಲಯ ಆದೇಶ ಉಲ್ಲಂಘನೆಯಾಗುತ್ತದೆ ಎಂದರು.

ಮಸೀದಿಗಳಲ್ಲಿನ ಪ್ರಾರ್ಥನೆ ಶಬ್ಧ ಕಿರಿಕಿರಿಯುಂಟು ಮಾಡುತ್ತದೆ. ಹಿಂದುತ್ವದ ಕೆಲಸ ಮಾಡಲು ಆಗದಿದ್ದರೆ ನನಗೆ ಅವಕಾಶ ಕೊಟ್ಟು ನೋಡಿ. ಗುಂಡು ಹಾರಿಸಿ ಪಾಲನೆ ಮಾಡಿಸುತ್ತೇನೆ. ಸುಪ್ರಿಂ ಕೋರ್ಟ್ ಆದೇಶ ಪಾಲನೆ ಮಾಡದ ಸರ್ಕಾರ ಹಾಗೂ ಪಾಲನೆ ಮಾಡದವರ ಮೇಲೆ ಗುಂಡು ಹಾರಿಸಿಯಾದರೂ ಜಾರಿಗೆ ತರುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹಿಂದುತ್ವ ಹಾಗೂ ಅಭಿವೃದ್ಧಿಯಲ್ಲಿ ಶೇ.25 ರಷ್ಟಾದರೂ ಅಳವಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಶ್ರೀರಾಮಸೇನೆ ಹೋರಾಟ ಶುರು ಮಾಡಲು ಅಣಿಯಾಗುತ್ತಿದೆ. ಪ್ರಾರ್ಥನೆ ಮಾಡಲು ನಾವು ವಿರೋಧಿಸುತ್ತಿಲ್ಲ, ಆದರೆ, ಶಬ್ದ ಮಾಲಿನ್ಯಕ್ಕೆ ನಮ್ಮ ತಕರಾರಿದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ಮಸೀದಿಗಳ ಮೇಲಿನ ಮೈಕ್ ಕಿತ್ತು ಬಿಸಾಕುತ್ತೇವೆ. ಅನೇಕ ಮುಸ್ಲಿಂ ದೇಶಗಳಲ್ಲಿಯೇ ಮಸೀದಿಗಳ ಮೈಕ್ ತೆಗೆಯಲಾಗಿದೆ. ಆದರೆ, ಇಲ್ಲಿ ಮಾತ್ರ ಯಾಕೆ ಕಾನೂನು ಪಾಲನೆಯಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಕಾಶ್ಮೀರದಲ್ಲಿ ಹಿಂದುಗಳ ಹತ್ಯೆ ನಿಂತಿಲ್ಲ ಎಂದು ಆಕ್ರೋಸ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್ ಅಲ್ಲಿ ಭೀತಿಯಿಂದ ನೂರಾರು ಹಿಂದೂ ಕುಟುಂಬಗಳು ಕಾಶ್ಮೀರ ತೊರೆದಿವೆ. ಕುಲ್ಗಾಮ್ ಜಿಲ್ಲಾಯಲ್ಲಿ ಕಾಶ್ಮೀರಿ ಪಂಡಿತ (ಹಿಂದೂ) ಶಿಕ್ಷಕಿ ರಜನಿ ಬಲ್ಲಾ (36) ಅವರನ್ನು ಉಗ್ರರು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.ಕಾಶ್ಮೀರದ ಬಾರಮುಲ್ಲಾ ಪ್ರದೇಶದಲ್ಲಿ ವಾಸಿಸುತ್ತಿರುವ 300 ಹಿಂದೂ ಕುಟುಂಬಗಳ ಪೈಕಿ ಅರ್ಧಕ್ಕೂ ಹೆಚ್ಚು ಕುಟುಂಬಗಳು ಬಳಿಕ ಆ ಪ್ರದೇಶ ತೊರೆದಿವೆ ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರದ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ. ಇನ್ನು ಕಾಶ್ಮೀರ ಚಲೋ ಆರಂಭಿಸಬೇಕಾಗುತ್ತದೆ. ಕಾಶ್ಮೀರಿ ಪಂಡಿತರ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement