ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜನಲ್ಲಿ ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಪ್ರಾಂಶುಪಾಲರು ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ.
ಯಾವುದೇ ಕಾರಣಕ್ಕೂ ತರಗತಿಗೆ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್ ತೀರ್ಪನ್ನು ಪಾಲಿಸದೆ ಪದೇ ಪದೇ ಆದೇಶ ಉಲ್ಲಂಘಿಸುತ್ತಿದ್ದರು. ಕಾಲೇಜಿನ ಕಲಿಕಾ ವಾತಾವರಣಕ್ಕೆ ವಿರುದ್ಧವಾಗಿ ವರ್ತಿಸಿದ್ದ 6 ಮಂದಿ ವಿದ್ಯಾರ್ಥಿನಿಯರನ್ನು ಈಗ ಅಮಾನತುಗೊಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ