ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಭಾರತೀಯ ಯುವ ಕಾಂಗ್ರೆಸ್‌ಗೆ ರಕ್ಷಾ ರಾಮಯ್ಯ ಸಲ್ಲಿಸಿದ ಸೇವಯನ್ನು ಪರಿಗಣಿಸಿ “ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ” ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಇತ್ತೀಚೆಗೆ ವಿಶೇಷವಾಗಿ ಉದಯಪುರದಲ್ಲಿ ಜರುಗಿದ ಕಾಂಗ್ರೆಸ್ ಚಿಂತನ ಸಮಾವೇಶದಲ್ಲಿ ಕೈಗೊಂಡ ನಿರ್ಣಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ರಾಷ್ಟ್ಟಮಟ್ಟದಲ್ಲಿ ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಒಂದು ವರ್ಷಗಳ ಕಾಲ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್‌ನ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement