ಕರ್ನಾಟಕದ ಕರಾವಳಿ, ಬೆಂಗಳೂರು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ  ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಖ್ಯವಾಗಿ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲೂ ಭಾರಿ ಮಳೆಯಾಗಲಿದೆ.

ಮಲೆನಾಡು ಭಾಗಗಳಾದ ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಮನಗರ ಜಿಲ್ಲೆಯಲ್ಲೂ ಜೋರಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕರ್ನಾಟಕ ಭಾಗದ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement