ಪಟ್ಟನಂತಿಟ್ಟ (ಕೇರಳ): ಕೇರಳದಲ್ಲಿ ಆಘಾತಕಾರಿ ಘಟನೆ ನಡೆದ ವರದಿಯಾಗಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯ ಅಜ್ಜಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
advertisement
ಈ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಮತ್ತು ಆರೋಪಿ ಇಬ್ಬರೂ ಹಿರಿಯ ನಾಗರಿಕರು. ಆರೋಪಿ ಶಿವದಾಸನಿಗೆ 60 ವರ್ಷ ವಯಸ್ಸಾಗಿದ್ದರೆ, ಸಂತ್ರಸ್ತ ಅಜ್ಜಿಗೆ 85 ವರ್ಷ. ಆರೋಪಿಯ ಮನೆಯಲ್ಲಿ ಕಳೆದ ಮೇ ತಿಂಗಳಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಸಂತ್ರಸ್ತೆ ಅತ್ಯಾಚಾರ ಆರೋಪಿಯ ಪತ್ನಿಯ ಅಜ್ಜಿ ಎಂದು ಹೇಳಿದ್ದಾರೆ.
ಸಂತ್ರಸ್ತೆ ತನಗಾದ ಕಷ್ಟವನ್ನು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯೊಬ್ಬರಿಗೆ ವಿವರಿಸಿದ್ದಾರೆ. ಇದಾದ ಬಳಿಕ ಅಂಗನವಾಡಿ ಕಾರ್ಯಕರ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಅಜ್ಜಿಗೆ ಪದೇ ಪದೇ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಆರೋಪಿ ವಿರುದ್ಧ ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ | |
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ