ಹುಬ್ಬಳ್ಳಿ: ಸರ್ಕಾರದ ಇಲಾಖೆಗಳ ವಾಹನಗಳನ್ನು ಹೊರತುಪಡಿಸಿ (ಜಿ, ಜಿಎ, ಜಿಬಿ ಶ್ರೇಣಿ ) ನಿಗಮ, ಮಂಡಳಿ, ಸಂಘ ಸಂಸ್ಥೆ ಇತ್ಯಾದಿಗಳ ಅಧೀನಕ್ಕೆ ಒಳಪಡುವ ಕಚೇರಿಗಳ ಖಾಸಗಿ ವಾಹನಗಳ ಮೇಲೆ ಸರ್ಕಾರದ ಲಾಂಛನ, ಚಿಹ್ನೆಗಳನ್ನು ತೆರವುಗೊಳಿಸುವಂತೆ ಹುಬ್ಬಳ್ಳಿ ಗಬ್ಬೂರಿನಲ್ಲಿರುವ ಪೂರ್ವ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಆದೇಶಿಸಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50 ರಲ್ಲಿ ನಿಗದಿಪಡಿಸಿರುವ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು. ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ನಿಯಮ 145- ಎ ರಲ್ಲಿ ಖಾಸಗಿ ವಾಹನಗಳು ಸರ್ಕಾರದ ಲಾಂಛನ ಹಾಗೂ ಚಿಹ್ನೆಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ಸರ್ಕಾರ ನಿರ್ಬಂಧಿಸಿದೆ. ಕೇಂದ್ರದ, ಭಾರತದ ಲಾಂಛನಗಳು ಅನುಚಿತ ಬಳಕೆಯ ನಿಷೇಧ ಕಾಯಿದೆ 2005ರ ಕಲಂ 3 ರಲ್ಲಿ ಯಾವುದೇ ಖಾಸಗಿ ವಾಹನಗಳ ಮಾಲೀಕರು ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ