ಕಾನ್ಪುರ ಹಿಂಸಾಚಾರ: 3 ಎಫ್ಐಆರ್, ರಾತ್ರೋರಾತ್ರಿ ಪೊಲೀಸ್ ಕಾರ್ಯಾಚರಣೆಯಲ್ಲಿ 36 ಜನರ ಬಂಧನ ; ಸಂಚುಕೋರರ ವಿರುದ್ಧ ಬುಲ್ಡೋಜರ್ ಕ್ರಮದ ಎಚ್ಚರಿಕೆ

ಕಾನ್ಪುರ: ಕಾನ್ಪುರ ಹಿಂಸಾಚಾರ ಪ್ರಕರಣದಲ್ಲಿ 36 ಜನರನ್ನು ಬಂಧಿಸಲಾಗಿದೆ ಮತ್ತು 3 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಕಾನ್ಪುರದ ಯತೀಂ ಖಾನಾ ಮತ್ತು ಪರೇಡ್ ಕ್ರಾಸ್‌ರೋಡ್‌ಗಳ ನಡುವೆಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ.
“…36 ಜನರನ್ನು ಬಂಧಿಸಲಾಗಿದೆ ಮತ್ತು ಇಲ್ಲಿಯವರೆಗೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ವೀಡಿಯೊದ ಆಧಾರದ ಮೇಲೆ ಹೆಚ್ಚಿನ ಜನರನ್ನು ಗುರುತಿಸಲಾಗುತ್ತಿದೆ” ಎಂದು ಪೊಲೀಸ್ ಕಮಿಷನರ್ ವಿಜಯ್ ಸಿಂಗ್ ಮೀನಾ ಹೇಳಿದ್ದಾರೆ.
ಸಂಚುಕೋರರ ವಿರುದ್ಧ ದರೋಡೆಕೋರ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಮತ್ತು ಅವರ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುವುದು ಅಥವಾ ನೆಲಸಮಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಾರುಕಟ್ಟೆ ಸ್ಥಗಿತಗೊಳಿಸಿದ್ದಕ್ಕಾಗಿ ವಿವಿಧ ಸಮುದಾಯಗಳಿಗೆ ಸೇರಿದ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಘರ್ಷಣೆಯ ನಂತರ ಇಬ್ಬರು ವ್ಯಕ್ತಿಗಳು ಮತ್ತು ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ. ಕೆಲವರು ಅಂಗಡಿಗಳನ್ನು ಮುಚ್ಚಲು ಯತ್ನಿಸಿದ ನಂತರ ಹಿಂಸಾಚಾರ ಪ್ರಾರಂಭವಾಯಿತು, ಅದನ್ನು ಇತರ ಗುಂಪು ವಿರೋಧಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರದಲ್ಲಿ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ. ಈ ಕುರಿತು ಆಡಳಿತಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ವಿರೋಧಿಸಿ ಕಾನ್ಪುರ್ ನಗರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಅಂಗಡಿಗಳನ್ನು ಮುಚ್ಚುವ ಪ್ರಯತ್ನದಲ್ಲಿ ಎರಡು ಸಮುದಾಯಗಳ ನಡುವೆ ಕಲ್ಲು ತೂರಾಟ ಮತ್ತು ಹಿಂಸಾಚಾರ ಸಂಭವಿಸಿದೆ. ಕಿಡಿಗೇಡಿಗಳನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಅಗತ್ಯಬಿದ್ದರೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಅನಗತ್ಯ ಹೇಳಿಕೆ ನೀಡಿ ವಾತಾವರಣ ಹಾಳು ಮಾಡಲು ಯತ್ನಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಬೀದಿಗಳಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ಆಯೋಜಿಸದಂತೆ ನೋಡಿಕೊಳ್ಳಬೇಕು ಎಂದು ಯೋಗಿ ಒತ್ತಿ ಹೇಳಿದರು. ಜೂನ್ 10ರೊಳಗೆ ಎಲ್ಲ ರಸ್ತೆಗಳನ್ನು ಅತಿಕ್ರಮಣ ಮುಕ್ತಗೊಳಿಸಬೇಕು ಹಾಗೂ ಅಕ್ರಮ ಟೆಂಪೋ ಸ್ಟ್ಯಾಂಡ್‌ಗಳನ್ನು ತೆರವುಗೊಳಿಸಬೇಕು. ಬಸ್‌ಗಳನ್ನು ಸಹ ಅವರ ನಿಗದಿತ ಸ್ಥಳಗಳಲ್ಲಿ ನಿಲುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಗಳ ಪೊಲೀಸ್ ಮತ್ತು ಆಡಳಿತಾಧಿಕಾರಿಗಳಿಗೆ ಸೂಚಿಸಿದರು.

ಪ್ರಮುಖ ಸುದ್ದಿ :-   ವ್ಯಕ್ತಿಯೊಬ್ಬರ ಖಾತೆಗೆ ಜಮೆಯಾಯ್ತು ಬರೋಬ್ಬರಿ 9900 ಕೋಟಿ ರೂ....! ಮುಂದಾಗಿದ್ದೇನು..?

ಶುಕ್ರವಾರದ ಪ್ರಾರ್ಥನೆಯ ನಂತರ ಕಾನ್ಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು, ಇತ್ತೀಚೆಗೆ ಜ್ಞಾನವಾಪಿ ವಿಚಾರದಲ್ಲಿ ಟಿವಿ ಚರ್ಚೆ ವೇಳೆ ಪ್ರವಾದಿ ಮೊಹಮ್ಮದ್ ವಿರುದ್ಧ ಮಾಡಿದ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರ ನೂಪುರ್ ಶರ್ಮಾ ವಿರುದ್ಧ ಪ್ರತಿಭಟಿಸಿ ಮಾರುಕಟ್ಟೆಯನ್ನು ಮುಚ್ಚುವಂತೆ ಕರೆ ನೀಡಿದ್ದಕ್ಕಾಗಿ ಎರಡು ಗುಂಪುಗಳ ಸದಸ್ಯರುಪರಸ್ಪರ ಕಲ್ಲು ತೂರಾಟ ನಡೆಸಿದರು. ಘರ್ಷಣೆಯಲ್ಲಿ ಹದಿಮೂರು ಪೊಲೀಸ್ ಸಿಬ್ಬಂದಿ ಮತ್ತು ಮೂವತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“50ರಿಂದ 100 ಸಂಖ್ಯೆಯ ಕೆಲವು ಯುವಕರು ಏಕಾಏಕಿ ರಸ್ತೆಗಿಳಿದು ಘೋಷಣೆ ಕೂಗಲು ಪ್ರಾರಂಭಿಸಿದರು. ಇನ್ನೊಂದು ಗುಂಪು ಅದನ್ನು ವಿರೋಧಿಸಿತು ಮತ್ತು ಕಲ್ಲು ತೂರಾಟಕ್ಕೆ ಕಾರಣವಾಯಿತು. ಸುಮಾರು ಎಂಟರಿಂದ ಹತ್ತು ಪೊಲೀಸರು ಸ್ಥಳದಲ್ಲಿದ್ದರು ಮತ್ತು ಅವರು ಸ್ವಲ್ಪ ಮಟ್ಟಿಗೆ ಪರಿಸ್ಥಿತಿಯನ್ನು ನಿಯಂತ್ರಿಸಿದರು. ನಿಯಂತ್ರಣ ಕೊಠಡಿಗೆ ತಕ್ಷಣ ಮಾಹಿತಿ ನೀಡಲಾಯಿತು ಮತ್ತು ನಾನು ಸೇರಿದಂತೆ ಹಿರಿಯ ಅಧಿಕಾರಿಗಳು 10 ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದರು” ಎಂದು ಮೀನಾ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement