‘ರೇಪ್ ಜೋಕ್ಸ್’ ಹೊಂದಿರುವ ವಿವಾದಾತ್ಮಕ ಬಾಡಿ ಸ್ಪ್ರೇ ಜಾಹೀರಾತು ತೆಗೆದುಹಾಕಲು ಟ್ವಿಟರ್, ಯೂ ಟ್ಯೂಬ್‌ಗೆ ಸೂಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸುವ ಸುಗಂಧ ದ್ರವ್ಯದ ಬ್ರಾಂಡ್‌ನ ಜಾಹೀರಾತುಗಳನ್ನು ತೆಗೆದುಹಾಕುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟ್ವಿಟ್ಟರ್‌ (Twitter) ಮತ್ತು ಯು ಟ್ಯೂಬ್‌ (YouTube)ಗೆ ಸೂಚಿಸಿದೆ. ಜಾಹೀರಾತು ಕಾಣಿಸಿಕೊಂಡ ಟಿವಿ ಚಾನೆಲ್‌ಗೆ ಕೂಡ ಸೂಚಿಸಿದೆ. ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬ್ರ್ಯಾಂಡ್‌ನ ಜಾಹೀರಾತಿನ ಕುರಿತು ಕೇಂದ್ರ ಮಾಹಿತಿ ಮತ್ತು … Continued

ಕನಿಷ್ಠ 2,000-ವರ್ಷ-ಹಳೆಯ ಗೋಡೆಗಳು ಪತ್ತೆ , ಕುಶಾನರ ಕಾಲದ್ದಿರಬಹುದು ಎಂದ ಎಎಸ್‌ಐ

ಪಾಟ್ನಾ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI ) ಪಾಟ್ನಾ ವೃತ್ತವು ಬಿಹಾರದ ಪಾಟ್ನಾದ ಕುಮ್ರಹಾರ್ ಪ್ರದೇಶದಲ್ಲಿ ಕೊಳದ ಪುನರುಜ್ಜೀವನದ ಕಾಮಗಾರಿಯ ಸ್ಥಳದಲ್ಲಿ ಕನಿಷ್ಠ 2,000 ವರ್ಷಗಳಷ್ಟು ಹಳೆಯದಾದ ಇಟ್ಟಿಗೆ ಗೋಡೆಗಳ ಅವಶೇಷಗಳನ್ನು ಪತ್ತೆ ಮಾಡಿದೆ. ಪಾಟ್ನಾ ರೈಲ್ವೆ ನಿಲ್ದಾಣದ ಪೂರ್ವಕ್ಕೆ 6 ಕಿಮೀ ದೂರದಲ್ಲಿರುವ ಕುಮ್ರಹಾರ್‌ನಲ್ಲಿ ಗುರುವಾರ ಅಗೆಯುವ ಕಾರ್ಯವನ್ನು ನಡೆಸುತ್ತಿದ್ದಾಗ ಅಧಿಕಾರಿಗಳು ಗೋಡೆಗಳ … Continued

ವಕೀಲರ ಉಪಸ್ಥಿತಿಯಿಲ್ಲದೆ ಸತ್ಯೇಂದ್ರ ಜೈನ್ ಅವರನ್ನು ಇಡಿ ಪ್ರಶ್ನಿಸಬಹುದು: ದೆಹಲಿ ಹೈಕೋರ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಹಾಗೂ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ವಕೀಲರ ಉಪಸ್ಥಿತಿಯಿಲ್ಲದೆ ಪ್ರಶ್ನಿಸಲು ಅವಕಾಶ ನೀಡಬೇಕೆಂಬ ಜಾರಿ ನಿರ್ದೇಶನಾಲಯದ ಮನವಿಯನ್ನು ದೆಹಲಿ ಹೈಕೋರ್ಟ್ ಶನಿವಾರ ಅಂಗೀಕರಿಸಿದೆ. ಪ್ರತಿವಾದಿ [ಜೈನ್] ವಿರುದ್ಧ ಯಾವುದೇ ಎಫ್‌ಐಆರ್ ಅಥವಾ ದೂರು ಇಲ್ಲವಾದ್ದರಿಂದ, ಅವರು ತಮ್ಮ ಹೇಳಿಕೆಯನ್ನು ದಾಖಲಿಸುವ ಸಂದರ್ಭದಲ್ಲಿ ತಮ್ಮ … Continued

ಪಠ್ಯ ಪುಸ್ತಕಗಳ ಪರಿಷ್ಕರಣಾ ಸಮಿತಿ ವಿಸರ್ಜನೆ, ರದ್ದು ಮಾಡಿಲ್ಲ, ಪುನಃ ಸಮಿತಿ ರಚನೆ ಪ್ರಸ್ತಾವನೆ ಇಲ್ಲ: ಸಿಎಂ ಬೊಮ್ಮಾಯಿ

ಚಿತ್ರದುರ್ಗ: ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯದ ಅವಧಿ ಮುಗಿದಿರುವ ಕಾರಣ ಸಮಿತಿಯನ್ನು ವಿಸರ್ಜಿಸಲಾಗಿದೆ. ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಶನಿವಾರ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ … Continued

ಭಯೋತ್ಪಾದಕರಿಂದ ಟಾರ್ಗೆಟ್‌ ಹತ್ಯೆ: ಕಾಶ್ಮೀರಿ ಪಂಡಿತ ಸಮುದಾಯದ 177 ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾವಣೆಗೆ ಆದೇಶ

ಕಾಶ್ಮೀರ: ಕಾಶ್ಮೀರದಲ್ಲಿ ಟಾರ್ಗೆಟ್‌ ಹತ್ಯೆಗಳ ಆತಂಕಕಾರಿ ಹೆಚ್ಚಳದ ಮಧ್ಯೆ, ಶ್ರೀನಗರದಲ್ಲಿ ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ್ ಶಿಕ್ಷಕರನ್ನು ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಲು ಸರ್ಕಾರ ಆದೇಶಿಸಿದೆ. ಕಾಶ್ಮೀರಿ ಪಂಡಿತ ಸಮುದಾಯ ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ದಾಳಿಗಳ ಸರಣಿಯ ಹಿನ್ನೆಲೆಯಲ್ಲಿ ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ … Continued

ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಕೋವಿಡ್ -19 ಪ್ರಕರಣಗಳ ಹೆಚ್ಚಳದ ಮಧ್ಯೆ, ಮಹಾರಾಷ್ಟ್ರ ಸರ್ಕಾರವು ನಾಗರಿಕರು ತೆರೆದ ಸ್ಥಳಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು ಧರಿಸುವಂತೆ ಆದೇಶವನ್ನು ಹೊರಡಿಸಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ವರದಿಯಾದ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ಅವರು … Continued

ಮಂಕಿಪಾಕ್ಸ್ ಪರೀಕ್ಷೆಗೆ 5 ವರ್ಷದ ಬಾಲಕಿ ಮಾದರಿ ಸಂಗ್ರಹ

ಲಕ್ನೋ: 5 ವರ್ಷದ ಬಾಲಕಿಯ ಮಾದರಿಯನ್ನು ಮಂಕಿಪಾಕ್ಸ್ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ಗಾಜಿಯಾಬಾದ್‌ನ ಮುಖ್ಯ ವೈದ್ಯಕೀಯ ಅಧಿಕಾರಿ (CMO) ತಿಳಿಸಿದ್ದಾರೆ. ಆಕೆಯ ದೇಹದಲ್ಲಿ ತುರಿಕೆ ಮತ್ತು ದದ್ದುಗಳ ಕಂಡುಬಂದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮುಂಜಾಗ್ರತೆ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಆಕೆಗೆ ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲ ಮತ್ತು ಕಳೆದ 1 ತಿಂಗಳಲ್ಲಿ ಅವಳು ಅಥವಾ ಅವಳ … Continued

ನಟಿ ಚಿತ್ರಾ ಹಳ್ಳಿಕೇರಿ ಪತಿ ವಿರುದ್ಧದ ಬ್ಯಾಂಕ್‌ ಖಾತೆ ದುರ್ಬಳಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಬ್ಯಾಂಕ್ ಖಾತೆ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ಚೈತ್ರಾ ಹಳ್ಳಿಕೇರಿ ಅವರು ತಮ್ಮ ಪತಿ ಉದ್ಯಮಿ ಬಾಲಾಜಿ ಪೋತರಾಜು ಮತ್ತು ಮಾವ ಎಂ ಕೆ ಪೋತರಾಜು ವಿರುದ್ಧ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯದ ಮುಂದಿನ ಪ್ರಕ್ರಿಯೆಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಬಾಲಾಜಿ ಪೋತರಾಜು ಮತ್ತು ಅವರ ತಂದೆ ಎಂ … Continued

ಕಾನ್ಪುರ ಹಿಂಸಾಚಾರ: 3 ಎಫ್ಐಆರ್, ರಾತ್ರೋರಾತ್ರಿ ಪೊಲೀಸ್ ಕಾರ್ಯಾಚರಣೆಯಲ್ಲಿ 36 ಜನರ ಬಂಧನ ; ಸಂಚುಕೋರರ ವಿರುದ್ಧ ಬುಲ್ಡೋಜರ್ ಕ್ರಮದ ಎಚ್ಚರಿಕೆ

ಕಾನ್ಪುರ: ಕಾನ್ಪುರ ಹಿಂಸಾಚಾರ ಪ್ರಕರಣದಲ್ಲಿ 36 ಜನರನ್ನು ಬಂಧಿಸಲಾಗಿದೆ ಮತ್ತು 3 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಕಾನ್ಪುರದ ಯತೀಂ ಖಾನಾ ಮತ್ತು ಪರೇಡ್ ಕ್ರಾಸ್‌ರೋಡ್‌ಗಳ ನಡುವೆಯೂ ಭದ್ರತೆಯನ್ನು ಹೆಚ್ಚಿಸಲಾಗಿದೆ. “…36 ಜನರನ್ನು ಬಂಧಿಸಲಾಗಿದೆ ಮತ್ತು ಇಲ್ಲಿಯವರೆಗೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ವೀಡಿಯೊದ ಆಧಾರದ ಮೇಲೆ ಹೆಚ್ಚಿನ ಜನರನ್ನು ಗುರುತಿಸಲಾಗುತ್ತಿದೆ” ಎಂದು ಪೊಲೀಸ್ ಕಮಿಷನರ್ ವಿಜಯ್ ಸಿಂಗ್ ಮೀನಾ … Continued

ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಓರ್ವನ ಬಂಧನ, ಐವರು ಆರೋಪಿಗಳ ಗುರುತು ಪತ್ತೆ, ಮೂವರು ಅಪ್ರಾಪ್ತರು

ಹೈದರಾಬಾದ್‌: ಹೈದರಾಬಾದ್‌ನಲ್ಲಿ ಕಳೆದ ವಾರ ಕಾರಿನೊಳಗೆ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಅಪ್ರಾಪ್ತರು ಎಂದು ಪೊಲೀಸರು ಹೇಳಿದ್ದಾರೆ. ತೆಲಂಗಾಣ ರಾಜಧಾನಿಯ ಹೃದಯಭಾಗದಲ್ಲಿ ಐಷಾರಾಮಿ ಕಾರುಗಳನ್ನು ಚಲಾಯಿಸುವ ರಾಜಕಾರಣಿಗಳ ಮಕ್ಕಳು ಮತ್ತು ಮೊಮ್ಮಕ್ಕಳನ್ನು ಒಳಗೊಂಡಿರುವ ಅಪರಾಧವು ಪ್ರತಿಭಟನೆಯ … Continued