ಆರೆಸ್ಸೆಸ್‌ನ ಹಿರಿಯ ಸ್ವಯಂ ಸೇವಕ, ವೈದ್ಯ ಡಾ.ವಿಠ್ಠಲ ನಿಧನ

posted in: ರಾಜ್ಯ | 0

ಹೊಸಪೇಟೆ: ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಸಂಚಾಲಕರು ಹಾಗೂ ವೈದ್ಯರಾಗಿದ್ದ ಡಾ.ವಿಠ್ಠಲ (79) ಅವರು ಭಾನುವಾರ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದ ಅವರು ವೈದ್ಯರಾಗಿಯೂ ಹೆಸರುವಾಸಿಯಾಗಿದ್ದರು.

advertisement

ಹಿರಿಯ ಸ್ವಯಂ ಸೇವಕ ಡಾ.ವಿಠ್ಠಲ ಅವರು, ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌ನ ವಿದ್ಯಾಸಂಸ್ಥೆ ಕಟ್ಟುವಲ್ಲಿ ಅವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಮಾಜಮುಖಿ ಕಾರ್ಯದಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ತುರ್ತು ಪರಿಸ್ಥಿತಿ ವಿರೋಧಿಸಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ತುರ್ತು ಪರಿಸ್ಥಿತಿ ವಿರೋಧಿಸಿ ನಡೆಸುತ್ತಿದ್ದ ಹೋರಾಟಗಳು ಹಾಗೂ ಹೋರಾಟಗಾರರಿಗೆ ಮತ್ತು ಅಂದಿನ ವಿರೋಧ ಪಕ್ಷದ ಕಾರ್ಯಕರ್ತರಿಗೆ ಆಶ್ರಯ ನೀಡಿದ್ದರು ಹಾಗೂ ಸಹಾಯ ಹಸ್ತ ಚಾಚಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಸಾಹಿತ್ಯ ವಿಮರ್ಶಕ ಪ್ರೊ. ಎಂ.ಎಚ್​.ಕೃಷ್ಣಯ್ಯ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement