ರಾಜ್ಯಸಭೆ ಚುನಾವಣೆ: ಬಿಜೆಪಿಯ ಮೂರೂ ಅಭ್ಯರ್ಥಿಗಳು ಆಯ್ಕೆ- ಅರುಣ್ ಸಿಂಗ್ ವಿಶ್ವಾಸ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಎಲ್ಲ 3 ಅಭ್ಯರ್ಥಿಗಳುಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ “ಜಗನ್ನಾಥ ಭವನ”ದಲ್ಲಿ ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು,
ಕೇಂದ್ರದ ಬಿಜೆಪಿ ಸರ್ಕಾರ ಮತ್ತು ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಉತ್ತಮ ಕೆಸಲಗಳನ್ನು ಗಮನದಲ್ಲಿಟ್ಟು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ 8 ವರ್ಷಗಳನ್ನು ಪೂರೈಸಿದ್ದು, ಬಡವರು, ರೈತರು, ಶೋಷಿತರು ಮತ್ತು ದಲಿತರು ಸೇರಿದಂತೆ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದೆ. ಬಿಜೆಪಿ ವತಿಯಿಂದ 15 ದಿನಗಳ ಕಾಲ ಮೋದಿಯವರ ಸಾಧನೆಯನ್ನು ಜನರಿಗೆ ತಿಳಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ. ಪ್ರತಿ ಗ್ರಾಮದ ಪ್ರತಿಯೊಂದು ಮನೆಯನ್ನು ಸಂಪರ್ಕಿಸಿ ಸಾಧನೆಯನ್ನು ತಿಳಿಸುವ ಕಾರ್ಯ ನಡೆಯುತ್ತಿದೆ. ಜೊತೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಕುರಿತು ಜನರಿಗೆ ಮಾಹಿತಿ ಕೊಡಲಾಗುತ್ತದೆ ಎಂದು ತಿಳಿಸಿದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಜಗಳ ಬಗೆಹರಿಸಲು ಬಂದ ಪತ್ನಿ ಸಂಬಂಧಿಕರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ ಪತಿ: ಒಬ್ಬರು ಸಾವು, ಮೂವರಿಗೆ ಗಾಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ