ಕರ್ನಾಟಕದಲ್ಲಿ ಭಾನುವಾರ 300ರ ಗಡಿ ದಾಟಿದ ಕೊರೊನಾ ಹೊಸ ಸೋಂಕುಗಳು..!

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಭಾನುವಾರ 300ರ ಗಡಿ ದಾಟಿದೆ. ಭಾನುವಾರ ರಾಜ್ಯದಲ್ಲಿ ೩೦೧ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರದಲ್ಲೇ ಭಾನುವಾರ 291 ಕೇಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ನಿನ್ನೆಗಿಂತ ಸೋಂಕು ಏರಿಕೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,414ಕ್ಕೆ ಏರಿಕೆ ಕಂಡಿದೆ. 146 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ ಶೇ. 1.40 ದಾಖಲಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು 6,426 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 21,413 ಸ್ಯಾಂಪಲ್‌ಗಳ ಕೊರೊನಾ ಪರೀಕ್ಷೆ ಮಾಡಲಾಗಿದೆ.ಬೆಂಗಳೂರು ನಗರದಲ್ಲಿ 291, ದಕ್ಷಿಣ ಕನ್ನಡದಲ್ಲಿ 2, ಮೈಸೂರಿನಲ್ಲಿ 3, ಬಳ್ಳಾರಿ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement