ಕಾನ್ಪುರ ಹಿಂಸಾಚಾರ: 29 ಮಂದಿ ಬಂಧನ; ಪಿಎಫ್‌ಐಗೆ ಸಂಬಂಧಿಸಿದ ದಾಖಲೆಗಳು ಪತ್ತೆ ಎಂದ ಉನ್ನತ ಪೊಲೀಸ್ ಅಧಿಕಾರಿ

ನವದೆಹಲಿ: ಶುಕ್ರವಾರ, ಜೂನ್ 3 ರಂದು ನಗರದ ಪರೇಡ್ ಚೌಕ್ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಒಟ್ಟು 29 ಜನರನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ಮುಸ್ಲಿಂ ನಾಯಕ ಹಯಾತ್ ಜಾಫರ್ ಹಶ್ಮಿ ಹಿಂಸಾಚಾರದ ಹಿಂದಿನ ಪ್ರಮುಖ ಸಂಚುಕೋರ ಎಂದು ಪೊಲೀಸರು ಗುರುತಿಸಿದ್ದಾರೆ.

ಮೌಲಾನಾ ಮುಹಮ್ಮದ್ ಜೌಹರ್ ಅಲಿ ಅಭಿಮಾನಿಗಳ ಸಂಘದ ರಾಷ್ಟ್ರೀಯ ಅಧ್ಯಕ್ಷ ಹಯಾತ್ ಜಾಫರ್ ಹಶ್ಮಿ ಅವರು ಟಿವಿ ಸುದ್ದಿ ಚರ್ಚೆಯಲ್ಲಿ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಕುರಿತು ಮಾಡಿದ ಹೇಳಿಕೆಯನ್ನು ಪ್ರತಿಭಟಿಸಲು ಮಾರುಕಟ್ಟೆ ಬಂದ್‌ಗೆ ಕರೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಶ್ಮಿ ಅವರು ಜನರನ್ನು ಪ್ರಚೋದಿಸಿದರು, ಇದು ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಮತ್ತು ಘರ್ಷಣೆಗೆ ಕಾರಣವಾಯಿತು. ಇದರಿಂದ ಅನೇಕ ಪೊಲೀಸ್ ಸಿಬ್ಬಂದಿ ಸೇರಿದಂತೆ 39 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಕಲ್ಲು ತೂರಾಟ ನಡೆಸಿದವರ ಜೊತೆಗೆ ಸಂಚುಕೋರರನ್ನೂ ಬಂಧಿಸಲಾಗಿದೆ.
ಗಲಭೆ ಮತ್ತು ಹಿಂಸಾಚಾರಕ್ಕಾಗಿ 1,000 ಕ್ಕೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಇತರ ಆರೋಪಿಗಳೆಂದರೆ ಎಹಿತ್‌ಶಾಮ್ ಕಬಾಡಿ, ಜೀಶಾನ್, ಆಕಿಬ್, ನಿಜಾಮ್, ಅಜೀಜುರ್, ಅಮೀರ್ ಜಾವೇದ್, ಇಮ್ರಾನ್ ಕಾಳೆ ಮತ್ತು ಯೂಸುಫ್ ಮನ್ಸೂರಿ ಸೇರಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement