ತನ್ನ ಭಾವಿ ಪತಿಯನ್ನೇ ಬಂಧಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಅಸ್ಸಾಂನ “ಲೇಡಿ ಸಿಂಘಂ ಕೂಡ ಈಗ ಅರೆಸ್ಟ್‌..!

ಗುವಾಹತಿ: ಕಳೆದ ತಿಂಗಳು ವಂಚನೆ ಆರೋಪದ ಮೇಲೆ ತನಗೆ ಮದುವೆ ನಿಶ್ಚಯವಾಗಿದ್ದ ತಮ್ಮ ಭಾವಿ ಪತಿಯನ್ನೇ ಬಂಧಿಸಿ ಜೈಲಿಗೆ ಕಳುಹಿಸಿ ದೇಶಾದ್ಯಂತ ವ್ಯಾಪಕವಾಗಿ ಪ್ರಶಂಸೆಗೆ ಒಳಗಾಗಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ಮೋನಿ ರಭಾ ಅವರನ್ನು ಸಹ ಇದೇ ಪ್ರಕರಣದಲ್ಲಿ ತನ್ನ ಭಾವಿ ಪತಿಯ ಜೊತೆ ಸೇರಿ ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ…!
ಅಸ್ಸಾಂನ ನಾಗಾಂವ್ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಎಂಎಸ್ ರಭಾ ಅವರನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ಬಂಧಿಸಲಾಯಿತು. ಮಜುಲಿ ಜಿಲ್ಲೆಯ ನ್ಯಾಯಾಲಯ ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇಬ್ಬರು ಗುತ್ತಿಗೆದಾರರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದಾರೆ, ಅವರು ಪೊಲೀಸ್‌ ಇನ್ಸ್ಪೆಕ್ಟರ್‌ ರಭಾ ಹಾಗೂ ಅವರ ಭಾವಿ ಪತಿ ರಾಣಾ ಪೊಗಾಗ್ ಅವರೊಂದಿಗೆ ಹಣಕಾಸಿನ ವ್ಯವಹಾರಗಳಲ್ಲಿ ಶಾಮೀಲಾಗಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ.
ಒಎನ್‌ಜಿಸಿಯಲ್ಲಿ ಉದ್ಯೋಗ ಮತ್ತು ಗುತ್ತಿಗೆ ನೀಡುವುದಾಗಿ ಭರವಸೆ ನೀಡಿ ಕೆಲವರಿಗೆ ವಂಚಿಸಿದ್ದಾರೆ ಎಂದು ಆರೋಪಿಸಿ ರಭಾ ಅವರು ತಮ್ಮ ಭಾವಿ ಪತಿ ಪೊಗಾಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ವಂಚನೆ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದ್ದು, ಮಜುಲಿ ಜೈಲಿನಲ್ಲಿದ್ದಾನೆ.

ಪ್ರಮುಖ ಸುದ್ದಿ :-   ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣ ಭಾರತದ ಜನಪ್ರಿಯ ನಟರಾದ ಅದಿತಿ ರಾವ್ ಹೈದರಿ-ಸಿದ್ಧಾರ್ಥ

ನಂತರ, ಲೇಡಿ ಸಿಂಘಮ್” ಎಂದು ಕರೆಯಲ್ಪಡುವ ರಭಾ ವಿರುದ್ಧ ಆರೋಪಗಳನ್ನು ಮಾಡಲಾಯಿತು – ಪೊಗಾಗ್ ಅವರ ಪರವಾಗಿ ರಭಾ ಹಣವನ್ನು ಸಂಗ್ರಹಿಸಿದ್ದಾರೆ. ಈ ಆರೋಪಗಳ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಭಾ ಅವರನ್ನು ಮಜುಲಿ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪೊಗಾಗ್ ಅವರೊಂದಿಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಮತ್ತು ಅವರು ಈ ವರ್ಷದ ನವೆಂಬರ್‌ನಲ್ಲಿ ಮದುವೆಯಾಗಲು ನಿರ್ಧರಿಸಿದ್ದರು.
ಈ ವರ್ಷದ ಜನವರಿಯಲ್ಲಿ ಬಿಹ್ಪುರಿಯ ಶಾಸಕ ಅಮಿಯಾ ಕುಮಾರ್ ಭುಯಾನ್ ಅವರೊಂದಿಗಿನ ಫೋನ್ ಸಂಭಾಷಣೆ ಸೋರಿಕೆಯಾದಾಗ ರಭಾ ಅವರು ವಿವಾದಕ್ಕೆ ಒಳಗಾಗಿದ್ದರು. ಅವರಿಬ್ಬರ ಮಧ್ಯೆ ತನ್ನ ಕ್ಷೇತ್ರದ ಜನತೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವಾಗ್ವಾದಗಳು ಕೇಳಿಬಂದವು.
ಸೋರಿಕೆಯಾದ ಆಡಿಯೋ ಟೇಪ್ ಕೋಲಾಹಲಕ್ಕೆ ಕಾರಣವಾದ ನಂತರ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಚುನಾಯಿತ ಪ್ರತಿನಿಧಿಗೆ ಸರಿಯಾದ ಗೌರವವನ್ನು ನೀಡಬೇಕು ಎಂದು ಹೇಳಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement