ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಸಿ: ಅಧಿಕಾರಿಗಳಿಗೆ ಸಚಿವ ಸುನಿಲಕುಮಾರ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಸಬೇಕು ಎಂದು ಇಂಧನ ಸಚಿವ ಸುನೀಲ್​ ಕುಮಾರ್​ಅವರು ಭಾನುವಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆಯ ಹಳ್ಳಿವರೆಗೆ ಹೋಗಿ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರ ಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ವರೆಗಿನ ಅಧಿಕಾರಿಗಳು ತಾಲೂಕಿನ ಎಲ್ಲ ಹಳ್ಳಿಗಳಿಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ವಿವಿಧ ಹಂತದ ಅಧಿಕಾರಿಗಳು ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಅಭಿಯಾನವನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು. ಅಭಿಯಾನದ ವಿವರಗಳನ್ನು ಪ್ರತಿ ತಿಂಗಳು ನಿಗದಿತ ನಮೂನೆಯಲ್ಲಿ ನಮೂದಿಸಿ, ಮಾಹಿತಿಯನ್ನು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸಬೇಕು. ವ್ಯವಸ್ಥಾಪಕ ನಿರ್ದೇಶಕರು ಪ್ರತಿ 3ನೇ ಸೋಮವಾರ ತಪ್ಪದೇ emg 1 [email protected] ಇ-ಮೇಲ್​ ಮೂಲಕ ಸರ್ಕಾರಕ್ಕೆ ಈ ಮಾಹಿತಿ ಕಳುಹಿಸಬೇಕೆಂದು ಆದೇಶಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement