ಪ್ರವಾದಿ ಮಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ: ಪಕ್ಷದ ವಕ್ತಾರೆ ನೂಪುರ್ ಶರ್ಮಾ ಅಮಾನತು ಮಾಡಿದ ಬಿಜೆಪಿ

ನವದೆಹಲಿ: ಇತ್ತೀಚಿನ ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮುಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಷ್ಟ್ರೀಯ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಬಿಜೆಪಿ ಹೈಕಮಾಂಡ್ ಭಾನುವಾರ ಅಮಾನತುಗೊಳಿಸಿದೆ. ದೆಹಲಿ ಬಿಜೆಪಿಯ ಮಾಧ್ಯಮ ಉಸ್ತುವಾರಿ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಪಕ್ಷವು ಕಿತ್ತುಹಾಕಿದೆ.
ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಅಮಾನತು ಪತ್ರದಲ್ಲಿ ನೂಪುರ್‌ ಶರ್ಮಾ ಕುರಿತು, ‘ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವ್ಯತಿರಿಕ್ತ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವಿರಿ… ಹೆಚ್ಚಿನ ವಿಚಾರಣೆ ಬಾಕಿ ಇದ್ದು, ತಕ್ಷಣದಿಂದ ಜಾರಿಗೆ ಬರುವಂತೆ ನಿಮ್ಮನ್ನು ಪಕ್ಷದಿಂದ ಮತ್ತು ನಿಮ್ಮ ಜವಾಬ್ದಾರಿಯಿಂದ ಅಮಾನತುಗೊಳಿಸಲಾಗಿದೆ’ ಎಂದು ಬರೆದಿದ್ದಾರೆ.
ಅಮಾನತುಗೊಂಡ ನಂತರ, ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಇಬ್ಬರೂ ಸಾಮಾಜಿಕ ಮಾಧ್ಯಮದಲ್ಲಿ ತಮಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದರು.

ಶುಕ್ರವಾರ, ಉತ್ತರ ಪ್ರದೇಶದ ಕಾನ್ಪುರದಲ್ಲಿ ನೂಪುರ್ ಶರ್ಮಾ ಮಾಡಿದ ಹೇಳಿಕೆಗಳ ವಿರುದ್ಧ ಮುಸ್ಲಿಂ ಸಂಘಟನೆಯೊಂದು ಪರೇಡ್ ಮಾರ್ಕೆಟ್‌ನಲ್ಲಿ ಅಂಗಡಿಗಳನ್ನು ಮುಚ್ಚಲು ಕರೆ ನೀಡಿದ ನಂತರ ಹಿಂಸಾಚಾರ ಭುಗಿಲೆದ್ದಿತು. ಘರ್ಷಣೆಯಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೂಪುರ್ ಶರ್ಮಾ ವಿರುದ್ಧ ಹೈದರಾಬಾದ್, ಪುಣೆ ಮತ್ತು ಮುಂಬೈನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಕರಣಗಳು ದಾಖಲಾಗಿವೆ.
ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಿದ ಸುದ್ದಿ ಹೊರಬೀಳುವ ಸ್ವಲ್ಪ ಸಮಯದ ಮೊದಲು, ಬಿಜೆಪಿ ಭಾನುವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಅದು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿಗಳ ಅವಮಾನವನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement