ಬಂಧನದಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಮನೆ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿಯ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಅವರ ಮನೆ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಅಕ್ರಮ ಹಣದ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೇ 30ರಂದು ಬಂಧಿಸಿತ್ತು.

ಕೇಜ್ರಿವಾಲ್ ಸರ್ಕಾರದ ಸಚಿವರು 2015-16ರಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಅದೇ ಪ್ರಕರಣದ ಮುಂದುವರಿದ ಭಾಗವಾಗಿ ಇಂದು, ಸೋಮವಾರ ಜೈನ್‌ ಅವರ ದೆಹಲಿ ನಿವಾಸ ಸೇರಿ ಹಲವು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ.

ಕಳೆದ ತಿಂಗಳು ಅಕಿಂಚನ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್, ಇಂಡೋ ಮೆಟಲ್ ಇಂಪೆಕ್ಸ್ ಪ್ರೈವೇಟ್ ಲಿಮಿಟೆಡ್, ಪರ್ಯಾಸ್ ಇನ್ಫೋಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳಾಯತನ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್, ಮತ್ತು ಜೆಜೆ ಐಡಿಯಲ್ ಲಿಮಿಟೆಡ್ ಈ ಎಸ್ಟೇಟ್ ಪ್ರೈವೇಟ್ ಲಿಮಿಟೆಡ್‌ನಿಂದ 4.81 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನುಇಡಿ ಜಪ್ತಿ ಮಾಡಿತ್ತು. ಪ್ರಕರಣದಲ್ಲಿ ಸ್ವಾತಿ ಜೈನ್, ಸುಶೀಲಾ ಜೈನ್, ಅಜಿತ್ ಪ್ರಸಾದ್ ಜೈನ್ ಮತ್ತು ಇಂದು ಜೈನ್ ಅವರಿಗೆ ಸೇರಿದ ಆಸ್ತಿಯನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸುಮಾರು ಒಂದು ತಿಂಗಳ ನಂತರ ಸಚಿವ ಸತ್ಯೇಂದ್ರ ಜೈನ್‌ ಅವರ ಬಂಧನವಾಗಿತ್ತು. ಈಗ ಅವರ ಮನೆ ಮೇಲೆ ದಾಳಿ ನಡೆದಿದೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement