ಮಂಗಳೂರು: ತಮಗೆ ಬೇಕಾದ ಹಾಗೆ ಮಾತನಾಡುವ ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಿ ಬರಲಿ, ಆಗ ಅವರಿಗೆ ನಮ್ಮ ದೇಶದಲ್ಲಿ ಸಿಗುವ ಸ್ವಾತಂತ್ರ್ಯ ಹಾಗೂ ದೇಶದ ಮಹತ್ವ ಗೊತ್ತಾಗುತ್ತದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹಿಜಾಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಹಾಗೂ ಇಲ್ಲಿ ಸಿಗುವ ಸ್ವಾತಂತ್ರ್ಯ ಗೊತ್ತಾಗುತ್ತೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡುವುದು, ಜಿಲ್ಲಾಧಿಕಾರಿಯನ್ನು ಭೇಟಿಯಾಗುತ್ತಾರೆ, ಪ್ರೆಸ್‌ಮೀಟ್ ಎಲ್ಲ ಮಾಡಬಹುದು. ಆದರೆ ಅವರು ಇದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ. ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ. ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಆಗ ಅವರಿಗೆ ಗೊತ್ತಾಗುತ್ತದೆ. ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವೂ ಆಗುತ್ತದೆ. ನಮಗೆ ಇಲ್ಲಿ ಎಲ್ಲ ವಿಷಯಕ್ಕೂ ಎಷ್ಟು ಸ್ವಾತಂತ್ರ್ಯವಿದೆ ಎಂಬುದು ಗೊತ್ತಾಗುತ್ತದೆ. ಇಂಥವರು ಒಮ್ಮೆ ಅಲ್ಲಿಗೆ ಹೋಗಿ ಬರಬೇಕು ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ