ಬೋಳ ಗ್ರಾಪಂ ರಸ್ತೆಗೆ ಹಾಕಿದ್ದ ನಾಥೂರಾಮ್ ಗೋಡ್ಸೆ ಹೆಸರಿನ ನಾಮಫಲಕ ತೆರವು

posted in: ರಾಜ್ಯ | 0

ಉಡುಪಿ: ಜಿಲ್ಲೆಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಎಂದು ನಾಮಫಲಕ ಹಾಕಿದ ಘಟನೆ ವರದಿಯಾಗಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಸ್ತೆ ಹಾಕಲಾಗಿದ್ದ ನಾಮಫಲಕವನ್ನು ಪೊಲೀಸರು ತೆಗೆದುಹಾಕಿದ್ದಾರೆ.
ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ ವ್ಯಾಪ್ತಿಯ ರಸ್ತೆಯೊಂದಕ್ಕೆ ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ ಎಂದು ನಾಮಫಲಕ ಹಾಕಲಾಗಿತ್ತು. ಇದರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ ಕಾಂಗ್ರೆಸ್‌ ಮುಖಂಡರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಹಾಗೂ ಬೋರ್ಡ್ ತೆರವುಗೊಳಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ ನೀಡಿದ್ದರು.

advertisement

ತಕ್ಷಣವೇ ಎಚ್ಚೆತ್ತ ಕಾರ್ಕಳ ಪೊಲೀಸರು, ಬೋಳ ಗ್ರಾಮ ಪಂಚಾಯತದವರ ಉಪಸ್ಥಿತಿಯಲ್ಲಿ ವಿವಾದಾಸ್ಪದ ನಾಮಫಲಕ ತೆರವುಗೊಳಿಸಿದ್ದಾರೆ.
ಗ್ರಾಮ ಪಂಚಾಯಕ್ಕೂ ಈ ಫಲಕಕ್ಕೂ ಯಾವುದೇ ಸಂಬಂಧವಿಲ್ಲ. ಇದು ಯಾರೋ ಕಿಡಿಗೇಡಿಗಳು ಹಾಕಿದ ನಾಮಫಲಕ. ಪಂಚಾಯತದಲ್ಲಿ ಈ ಹೆಸರಿಡುವ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ ಹಾಗೂ ಗ್ರಾಪಂ ಈ ನಾಮಫಲಕ ಹಾಕಿಲ್ಲ ಎಂದು ಪಿಡಿಒ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂತಹ ದುರ್ಘಟನೆಗಳು ನಡೆಯುತ್ತಿವೆ. ರಾತ್ರೊರಾತ್ರಿ ಯಾರೋ ಕಿಡಿಗೇಡಿಗಳು ನಾಮಫಲಕ ಅಳವಡಿಸಿದ್ದಾರೆ. ಕೂಡಲೇ ಅವರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಯುವ ಕಾಂಗ್ರೆಸ್‌ ಮುಖಂಡರು ಒತ್ತಾಯಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಬೆಳಗಾವಿ ನಂತರ ಈಗ ಮೂಡಲಗಿಯ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement