ಮಲ್ಪೆ ಬೀಚ್​ನಲ್ಲಿ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ವಿಜಯಪುರದ ನಾಲ್ವರ ರಕ್ಷಣೆ

posted in: ರಾಜ್ಯ | 0

ಉಡುಪಿ: ಮಲ್ಪೆ ಬೀಚ್​ನಲ್ಲಿ ಸಮುದ್ರದಲ್ಲಿ ಕೊಚ್ಚಿಹೋಗುತ್ತಿದ್ದ ನಾಲ್ವರನ್ನು ಜೀವ ರಕ್ಷಕ ದಳದ ಸಿಬ್ಬಂದಿ ರಕ್ಷಿಸಿ ದುರಂತವನ್ನು ತಪ್ಪಿಸಿದ್ದಾರೆ.
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವಿಜಯಪುರದ ಮೂಲದ ಮೋಬಿನ್, ಸೋಫಿಯಾ, ಅಹ್ಮದ್ ಮತ್ತು ಮೊಹಮ್ಮದ್ ಎಂಬ ನಾಲ್ವರು ಪ್ರವಾಸಿಗರನ್ನು ರಕ್ಷಿಸಲಾಗಿದೆ.

advertisement

ವಿಜಯಪುರದ ಮೂಲದವರಾದ ಇವರು ಮಲ್ಪೆ ಬೀಚ್​​ಗೆ ಪ್ರವಾಸಕ್ಕೆಂದು ಬಂದಿದ್ದು, ಈ ವೇಳೆ ಕಡಲ ಅಬ್ಬರ ಜೋರಾಗಿದ್ದು, ಇಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆಯನ್ನೂ ನೀಡಿದ್ದರು. ಆದರೂ ಇವರು ಈಜಲು ಸಮುದ್ರಕ್ಕೆ ಇಳಿದಿದ್ದಾರೆ ಎನ್ನಲಾಗಿದೆ. ಈ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಪ್ರಾಣ ರಕ್ಷಣೆಗಾಗಿ ಕೂಗಿದ್ದಾರೆ. ತಕ್ಷಣವೇ ಪ್ರವಾಸಿಗರು ಜೀವರಕ್ಷಕ ಪಡೆಗೆ ಮಾಹಿತಿ ನೀಡಿದ್ದಾರೆ. ಕಾರ್ಯಪ್ರವೃತ್ತರಾದ ಜೀವ ರಕ್ಷಕ ದಳದ ಭರತ್​, ಮಧು, ರವಿ ಹಾಗೂ ವಿನೋದ್​​ ಎಂಬವರು ಪ್ರವಾಸಿಗರನ್ನು ರಕ್ಷಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತರಿಂದ ಧ್ವಜಾರೋಹಣ; ಸಚಿವ ಅಶೋಕ

ನಿಮ್ಮ ಕಾಮೆಂಟ್ ಬರೆಯಿರಿ

advertisement