ನಾಳೆ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಸಿನೆಮಾ ನಟ ಮುಖ್ಯಮಂತ್ರಿ ಚಂದ್ರು ಮಂಗಳವಾರ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕರ್ನಾಟಕದಲ್ಲೂ ತನ್ನ ಸಂಘಟನೆ ಬಲಪಡಿಸಿಕೊಳ್ಳುತ್ತಿರುವ ಆಮ್‌ ಆದ್ಮಿ ಪಕ್ಷವನ್ನು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಕಾಂಗ್ರೆಸ್‌ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೇಸರಗೊಂಡು ಇತ್ತೀಚೆಗಷ್ಟೇ ವಿಧಾನಪರಿಷತ್ತಿನ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಹಾಗೂ ರಾಷ್ಟ್ರೀಯ ವಕ್ತಾರ ಬ್ರಿಜೇಶ್‌ ಕಾಳಪ್ಪ ಅವರು ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದರು. ಅವರಿಬ್ಬರೂ ಆಮ್‌ ಆದ್ಮಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಚಂದ್ರು ಅವರು ನಾಳೆ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬ್ರಿಜೇಶ್‌ ತಿಂಗಳಾಂತ್ಯದೊಳಗೆ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement