ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವು: ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರ, ಪ್ರಕರಣದ ತನಿಖೆ – ಸಿಎಂ ಬೊಮ್ಮಾಯಿ

 ಬೆಂಗಳೂರು/ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಕಲುಷಿತ ನೀರು ಕುಡಿದು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 20ಕ್ಕೂ ಹೆಚ್ಚಿನ ಪರಿಸ್ಥಿತಿ ಹದಗೆಟ್ಟಿದೆ. ಕೆಲವರ ಕಿಡ್ನಿಗೂ ಹಾನಿ ಉಂಟಾಗಿದೆ ಎಂದು ಹೇಳಲಾಗಿದೆ. ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ ಎನ್ನಲಾಗಿದ್ದು, ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ನಿಗಾ ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಮತ್ತೊಬ್ಬರು ಸಾವಿಗೀಡಾಗಿದ್ದು ಸೇರಿದಂತೆ ಈವರೆಗೆ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನು ಮಲ್ಲಮ್ಮ, ಅಬ್ದುಲ್ ಗಫೂರ್ ಹಾಗೂ ಮೊಹಮದ್ ನೂರ್ ಎಂದು ಗುರುತಿಸಲಾಗಿದೆ. ಈ ಮೂವರೂ ಈ ಮೊದಲು ಚಿಕಿತ್ಸೆ ಪಡೆದಿದ್ದರು. ಆದರೆ ಇದ್ದಕ್ಕಿದ್ದಂತೆ ಸಮಸ್ಯೆಗಳು ಉಲ್ಬಣಿಸಿ ಮೃತಪಟ್ಟರು ಎಂದು ಹೇಳಲಾಗಿದೆ.
ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ. ಕಲುಷಿತ ನೀರು ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣ ತನಿಖೆಗೆ ಸೂಚನೆ ನೀಡಲಾಗಿದೆ. ನೀರಿನ ಮಾದರಿಗಳನ್ನು ಸಂಗ್ರಹಿಸಿ, ತಪಾಸಣೆಗೆ ಒಳಪಡಿಸಲಾಗಿದೆ. ಡಿವೈಎಸ್​ಪಿ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಅಧಿಕಾರಿಗಳ ಲೋಪದೋಷದ ಬಗ್ಗೆಯೂ ತನಿಖೆ ಮಾಡಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement