ಹಿಜಾಬ್ ವಿವಾದ: ಪತ್ರಿಕಾಗೋಷ್ಠಿ ನಡೆಸಿದ ವಿದ್ಯಾರ್ಥಿಗಳಿಗೆ ಮಂಗಳೂರು ವಿವಿ ಕಾಲೇಜಿನಿಂದ ನೋಟಿಸ್

ಮಂಗಳೂರು: ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರಿಗೆ ವಿವಿಯಿಂದ ನೊಟೀಸ್​ ಜಾರಿಯಾಗಿದೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿವಿ ಕಾಲೇಜು ಪ್ರಾಂಶುಪಾಲೆ ಡಾ.ಅನುಸೂಯ ರೈ ನೋಟೀಸ್ ಜಾರಿ ಮಾಡಿದ್ದಾರೆ.
ಬಾಹ್ಯಶಕ್ತಿಗಳ ಜೊತೆಗೂಡಿ ಪತ್ರಿಕಾಗೋಷ್ಠಿ ನಡೆಸಿದ್ದೀರಿ, ಕಾಲೇಜಿನ ವಿರುದ್ಧವಾಗಿ, ಪ್ರಾಂಶುಪಾಲರ ವಿರುದ್ಧ ಹೇಳಿಕೆ ನೀಡಿ ಕಾಲೇಜಿನ ಘನತೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ನೊಟೀಸ್​​ನಲ್ಲಿ ಹೇಳಲಾಗಿದೆ.

ಈ ರೀತಿಯ ವರ್ತನೆ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು? ಈ ಬಗ್ಗೆ ಮೂರು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದಾರೆ.
ಹಿಜಾಬ್ ವಿದ್ಯಾರ್ಥಿನಿ ಗೌಸಿಯಾ ಸೇರಿ ಇತರ ವಿದ್ಯಾರ್ಥಿನಿಯರಿಗೆ ನೋಟೀಸ್ ನೀಡಲಾಗಿದ್ದು, ಮೊದಲ ಹಂತವಾಗಿ ನೊಟೀಸ್​ ನೀಡಲಾಗಿದೆ. ಈ ಬಳಿಕವೂ ನಿಯಮ ಮೀರಿದರೆ ಕಾಲೇಜಿನಿಂದ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಶನಿವಾರ ಪತ್ರಿಕಾಗೋಷ್ಠಿ ನಡೆಸಿ ವಿದ್ಯಾರ್ಥಿನಿಯರಿಗೆ ಗಡುವು ನೀಡಿದ ಬೆನ್ನಲ್ಲೇ ಇಂದು, ಸೋಮವಾರ ನೊಟೀಸ್​ ನೀಡಿ ಎಚ್ಚರಿಕೆ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement