2006ರ ವಾರಾಣಸಿ ಸರಣಿ ಸ್ಫೋಟ: ಭಯೋತ್ಪಾದಕ ವಲಿಯುಲ್ಲಾ ಖಾನ್‌ಗೆ ಮರಣದಂಡನೆ ವಿಧಿಸಿದ ಘಾಜಿಯಾಬಾದ್ ನ್ಯಾಯಾಲಯ

ಗಾಜಿಯಾಬಾದ್‌: 2006ರ ವಾರಾಣಸಿ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಹಾಗೂ ಭಯೋತ್ಪಾದಕ ವಲಿಯುಲ್ಲಾ ಖಾನ್‌ಗೆ ಗಾಜಿಯಾಬಾದ್ ನ್ಯಾಯಾಲಯವು ಸೋಮವಾರ ಮರಣದಂಡನೆ ವಿಧಿಸಿದೆ.
ಸ್ಫೋಟದ 16 ವರ್ಷಗಳ ನಂತರ ತೀರ್ಪು ಬಂದಿದೆ,
ಮಾರ್ಚ್ 7, 2006 ರಂದು ಉತ್ತರ ಪ್ರದೇಶದ ವಾರಾಣಸಿಯ ಸಂಕಟ ಮೋಚನ್ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸ್ಫೋಟಗಳು ಸಂಭವಿಸಿದ್ದವು. ಇದರಲ್ಲಿ ಕನಿಷ್ಠ 20 ಜನರು ಸಾವಿಗೀಡಾಗಿದ್ದರು ಮತ್ತು ಸುಮಾರು 100 ಜನರು ಗಾಯಗೊಂಡಿದ್ದರು.

ಶನಿವಾರ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಜಿತೇಂದ್ರಕುಮಾರ ಸಿನ್ಹಾ ಅವರು ವಲಿಯುಲ್ಲಾನನ್ನು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಕೊಲೆ ಯತ್ನ ಮತ್ತು ಸ್ಫೋಟಕ ಕಾಯ್ದೆಯಡಿ ದಾಖಲಿಸಲಾದ ಎರಡು ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ.
ಪ್ರಯಾಗ್‌ರಾಜ್‌ನಿಂದ ಬಂದ ವಲಿಯುಲ್ಲಾನನ್ನು ಪೊಲೀಸರು ಬಂಧಿಸಿದ ನಂತರ ವಾರಾಣಸಿ ವಕೀಲರು ಆತನ ಪರವಾಗಿ ವಾದಿಸಲು ನಿರಾಕರಿಸಿದ ನಂತರ ಅವರ ಪ್ರಕರಣವನ್ನು ಗಾಜಿಯಾಬಾದ್‌ಗೆ ವರ್ಗಾಯಿಸಲಾಯಿತು.
ಆತ ಲಂಕಾ ಮತ್ತು ದಶಾಶ್ವಮೇಧ್ ಪೊಲೀಸ್ ಠಾಣೆಗಳಲ್ಲಿ ಮತ್ತು ವಾರಣಾಸಿಯ ಸರ್ಕಾರಿ ರೈಲ್ವೆ ಪೊಲೀಸ್ ಆವರಣದಲ್ಲಿ ದಾಖಲಾಗಿರುವ ಆರು ಪ್ರಕರಣಗಳನ್ನು ಒಳಗೊಂಡ ಮೂರು ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸಿದ.ಎರಡು ಪ್ರಕರಣಗಳಲ್ಲಿ ದೋಷಿ ಎಂದು ಘೋಷಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ ರಾಜೇಶ್ ಶರ್ಮಾ ತಿಳಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಯು ಒಂದು ಪ್ರಕರಣದಲ್ಲಿ ಖುಲಾಸೆಗೊಂಡಿದ್ದಾನೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement