ಅಂಕೋಲಾ: ಮೀನು ಹಿಡಿಯುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಸಾವು

posted in: ರಾಜ್ಯ | 0

ಅಂಕೋಲಾ: ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಮಾಂಗಟೇಶ್ವರ ಗುಡ್ಡದ ಬಳಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಗಾಬೀತ ಕೇಣಿ ನಿವಾಸಿ ಅಂಕುಶ ರಾಮದಾಸ ಅಂಕೋಲೆಕರ ಎಂದು ಗುರುತಿಸಲಾಗಿದೆ. ಈತ ಸೋಮವಾರ ಸಂಜೆ ಮಾಂಗಟೇಶ್ವರ ಗುಡ್ಡದ ಸಮೀಪ ಕೈ ಬಲೆ ಬೀಸುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಸಮುದ್ರದಲ್ಲಿ ಬಿದ್ದು ನೀರು ಪಾಲಾಗಿದ್ದ ಎಂದು ಹೇಳಲಾಗಿದೆ.

advertisement

ಮಂಗಳವಾರ ಬೆಳಿಗ್ಗೆ ದೋಣಿಯ ಮೂಲಕ ಮೀನುಗಾರಿಕೆಗೆ ತೆರಳಿದ್ದ ಕೆಲವರು ಸಮುದ್ರದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ..ನಂತರ ಬೆಲೇಕೇರಿ ಕರಾವಳಿ ಕಾವಲು ಪಡೆ ಮತ್ತು ಅಂಕೋಲಾ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಕಾರದಿಂದ ಶವವನ್ನು ನೀರಿನಿಂದ ಮೇಲೆತ್ತಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗಾಗಿ. ತಾಲೂಕಾ ಆಸ್ಪತ್ರೆಗೆ ಕಳುಹಿಸಲಾಯಿತು.
ಅಂಕೋಲಾ ಪಿಎಸ್‌ಐ ಮಹಾಂತೇಶ ವಾಲ್ಮೀಕಿ, ಕರಾವಳಿ ಕಾವಲು ಪಡೆ ಸಿಬ್ಬಂದಿ ಮೋಹನದಾಸ ಶೇಣ್ವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಐವರು ಆರೋಪಿಗಳನ್ನು ವಶಕ್ಕೆ ಪಡೆದ ಎನ್‌ಐಎ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement