ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್‌ ರೆಡ್ಡಿ ಬರ್ಬರ ಹತ್ಯೆ

posted in: ರಾಜ್ಯ | 0

ಕೋಲಾರ: ದುಷ್ಕರ್ಮಿಗಳ ಗುಂಪೊಂದು ಕೋಲಾರ ಜಿಲ್ಲೆಯ ಮುಳಬಾಗಲು ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮುಳಬಾಗಲು ನಗರದ ಮುತ್ಯಾಲಪೇಟೆಯಲ್ಲಿ ನಡೆದಿದೆ.
ಜಗನ್ಮೋಹನ್ ರೆಡ್ಡಿ (45) ಕೊಲೆಯಾದ ನಗರಸಭೆ ಸದಸ್ಯ. ಈತ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರ ಆಪ್ತ. ಸತತ ಎರಡನೇ ಬಾರಿ ಪಕ್ಷೇತರ ನಗರ ಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ರಾತ್ರಿ ಹೊತ್ತು ಮನೆಯಿಂದ ಹೊರಬಂದ ಜಗನ್ಮೋಹನ್​ ರೆಡ್ಡಿಗಾಗಿ ಹೊಂಚು ಹಾಕಿದ್ದ ನಾಲ್ಕೈದು ದುಷ್ಕರ್ಮಿಗಳು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

advertisement

ಮುತ್ಯಾಲಪೇಟೆಯ ಅವರ ನಿವಾಸದ ಬಳಿ ಇರುವ ದೇಗುಲದ ಬಾಗಿಲು ತೆರೆಯುವಾಗ ಹೊರಗಡೆ ನಿಂತಿದ್ದ ಕೆಲ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿರುವುದು ಗೊತ್ತಾಗಿದೆ. ಮಂಗಳವಾರ ಬೆಳಿಗ್ಗೆ 5:45ಕ್ಕೆ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಪೊಲೀಸರು ಮಾಹಿತಿ ಕಲೆಹಾಕಲಾಗುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಮುಳಬಾಗಲು ಡಿವೈಎಸ್​ಪಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಳಬಾಗಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement