ಆಮ್ ಆದ್ಮಿ ಪಾರ್ಟಿಗೆ ಮುಖ್ಯಮಂತ್ರಿ ಚಂದ್ರು ಸೇರ್ಪಡೆ

ಬೆಂಗಳೂರು: ಖ್ಯಾತ ನಟ, ವಿಧಾನ ಪರಿಷತ್‌ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಮಂಗಳವಾರ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದರು.
ಬೆಂಗಳೂರಿನ ಹೋಟೆಲ್‌ ಪರಾಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಪಕ್ಷದ ಬಾವುಟ ನೀಡಿ ಮುಖ್ಯಮಂತ್ರಿ ಚಂದ್ರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಾರ್ಟಿಯ ಸಿದ್ಧಾಂತಗಳು ಇಷ್ಟವಾದ ಕಾರಣದಿಂದಾಗಿ ಈ ಪಕ್ಷವನ್ನು ಸೇರ್ಪಡೆಗೊಂಡಿರುವುದಾಗಿ ಅವರು ಹೇಳಿದ್ದಾರೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಲ್ಲಿ ಪ್ರಾಮಾಣಿಕರು ಈಗ ಅಸ್ಪೃಶ್ಯರಾಗಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ – ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಮಹತ್ವ ನೀಡಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಚಂದ್ರು ಇತ್ತೀಚೆಗಷ್ಟೇ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಕಾರ್ಯಕ್ರಮದಲ್ಲಿ ಆಮ್‌ ಆದ್ಮಿ ಪಕ್ಷದ ಕೆ.ಮಥಾಯಿ, ವಿಜಯ್ ಶರ್ಮಾ, ಶಾಂತಲಾ ದಾಮ್ಲೆ, ಮೋಹನ್ ದಾಸರಿ, ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಬಿ. ಟಿ. ನಾಗಣ್ಣ, ಜಗದೀಶ್ ಚಂದ್ರ ಸೇರಿದಂತೆ ಅನೇಕ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು: ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗ ಪತ್ತೆ ; ಡಿಜಿ ಹಳ್ಳಿ ನಿಷೇಧಿತ ವಲಯವೆಂದು ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement