ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಇರ್ಫಾನ್‌ ಪಾಷ ಮತ್ತು ಮೊಹಮದ್ ಮುಜೀಬುಲ್ಲಾ ಜಾಮೀನು ಮನವಿಯ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಕಾಯ್ದಿರಿಸಿದೆ.
ಇರ್ಫಾನ್‌ ಪಾಷ ಮತ್ತು ಮೊಹಮದ್ ಮುಜೀಬುಲ್ಲಾ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಶಿವಶಂಕರ ಅಮರಣ್ಣವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

ಪ್ರಕರಣದ ಐವರು ಆರೋಪಿಗಳಾದ ಅಸೀಮ್‌ ಶರೀಫ್‌, ಇರ್ಫಾನ್‌ ಪಾಷಾ, ವಸೀಂ ಅಹಮದ್‌, ಮೊಹಮದ್‌ ಸಾದಿಕ್‌ ಅಲಿಯಾಸ್‌ ಮಜಹರ್‌ ಮತ್ತು ಮೊಹಮ್ಮದ್‌ ಮುಜೀಬುಲ್ಲಾ ಅಲಿಯಾಸ್‌ ಮೌಲಾ ಅವರು 2016ರ ಅಕ್ಟೋಬರ್ 27ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆರೋಪಿಗಳ ಪರ ಎಸ್‌. ಬಾಲಕೃಷ್ಣನ್‌ ಮತ್ತು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಪರ ವಿಶೇಷ ಪ್ರಾಸಿಕ್ಯೂಟರ್ ಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು ಎಂದು ವರದಿ ತಿಳಿಸಿದೆ.
2016ರ ಅಕ್ಟೋಬರ್‌ 16ರಂದು ಬೆಳಗಿನ ಒಂಬತ್ತು ಗಂಟೆ ಸಮಯದಲ್ಲಿ ಶಿವಾಜಿ ನಗರದ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್‌ ಸ್ಟೋರ್ ಎದುರು ತನ್ನ ಸ್ನೇಹಿತರ ಜತೆ ಗಣವೇಷಧಾರಿಯಾಗಿ ಜ್ಯೂಪಿಟರ್‌ ಬೈಕ್‌ನಲ್ಲಿ ಕುಳಿತಿದ್ದ ರುದ್ರೇಶ್‌ ಅವರನ್ನು ಹತ್ಯೆ ಮಾಡಲಾಗಿತ್ತು. ಅಂದು ಆ ಪ್ರದೇಶದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement