ಉಪ್ಪಿನಂಗಡಿ: ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಪ್ರತಿಭಟನೆ ನಡೆಸಿದ 23 ವಿದ್ಯಾರ್ಥಿನಿಯರ ಅಮಾನತು

ಮಂಗಳೂರು: ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ 23 ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.
ಪುತ್ತೂರು ಬಿಜೆಪಿ ಶಾಸಕ ಮತ್ತು ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷ ಸಂಜೀವ ಮಠಂದೂರು ಮಂಗಳವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಸೋಮವಾರ ಸಿಡಿಸಿ ಸಭೆ ನಡೆಸಿ ಅವರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಏಳು ವಿದ್ಯಾರ್ಥಿನಿಯರನ್ನು ಸಮಿತಿ ಅಮಾನತುಗೊಳಿಸಿತ್ತು.

ಇಸ್ಲಾಂ ಧರ್ಮದಲ್ಲಿ ತಲೆ ಸ್ಕಾರ್ಫ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಎಲ್ಲೆಲ್ಲಿ ಡ್ರೆಸ್ ಕೋಡ್‌ ಇರುವ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲರೂ ಏಕರೂಪದ ಉಡುಗೆ ನಿಯಮವನ್ನು ಪಾಲಿಸಬೇಕು ಎಂಬ ವಿಷಯದ ಕುರಿತು ಈ ವರ್ಷದ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದರೂ ಹುಡುಗಿಯರು ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಬಟ್ಟೆಯನ್ನು ನಿಷೇಧಿಸಿರುವ ಕರ್ನಾಟಕ ಸರ್ಕಾರದ ಆದೇಶವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.
ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೆಲವು ವದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸಿದ ನಂತರ ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೊರೆ ಹೋದ ನಂತರ ಈ ತೀರ್ಪು ಬಂದಿದೆ.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ 23 ಕೋವಿಡ್-19 ಪ್ರಕರಣಗಳು ವರದಿ; ಹೆದರುವ ಅಗತ್ಯ ಇಲ್ಲ ; ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement