ಚಲಿಸುತ್ತಿದ್ದ ಬಸ್ಸಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ನವದೆಹಲಿ: ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವರದಿಯ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಬಾಲಕಿಯು ಪಶ್ಚಿಮ ಚಂಪಾರಣ್‌ನ ಬೆಟ್ಟಿಯಾಗೆ ಹೋಗಲು ಬಸ್‌ಗಾಗಿ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಬಸ್ ಚಾಲಕನು ಬೆಟ್ಟಿಯಾಗೆ ಹೋಗುವುದಾಗಿ ಹೇಳಿ ಸಂತ್ರಸ್ತೆಯನ್ನು ಬಸ್‌ಗೆ ಹತ್ತಿಸಿಕೊಂಡಿದ್ದಾನೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಬೆಟ್ಟಿಯಾ-ಸದರ್ ) ಮುಕುಲ್ ಪಾಂಡೆ ಹೇಳಿದರು.

advertisement

ತನಗೆ ಬಸ್‌ನಲ್ಲಿ ಪಾನೀಯವನ್ನು ನೀಡಲಾಯಿತು ನಂತರ ತಾನು ಪ್ರಜ್ಞಾಹೀನಳಾದೆ. ಅದರ ನಂತರ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ.
ಪ್ರಜ್ಞೆ ಬಂದ ನಂತರ ತಾನು ಬಸ್‌ ಲಾಕ್‌ ಆಗಿರುವುದು ಕಂಡುಬಂತು ಎಂದು ಅಪ್ರಾಪ್ತೆ ಪೊಲೀಸರಿಗೆ ತಿಳಿಸಿದ್ದಾಳೆ. “ಆರೋಪಿಗಳು ಆಕೆಯನ್ನು ಬಸ್ಸಿನೊಳಗೆ ಲಾಕ್ ಮಾಡಿ ಪರಾರಿಯಾಗಿದ್ದರು. ಕೂಗಿಕೊಂಡಾಗ ದಾರಿಯಲ್ಲಿ ಹೋಗುತ್ತಿದ್ದ ಜನರು ಬಾಗಿಲು ತೆರೆದು ಪೊಲೀಸರಿಗೆ ಮಾಹಿತಿ ನೀಡಿದರು” ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರಲ್ಲಿ ಬಸ್ಸಿನ ಚಾಲಕ, ಕಂಡಕ್ಟರ್ ಮತ್ತು ಬಸ್ಸಿನ ಸಹಾಯಕ ಸೇರಿದ್ದಾರೆ.
ಬೆಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಈಗ, ಸಂಗ್ರಹಿಸಿದ ಸಾಕ್ಷ್ಯಗಳ ವಿಶ್ಲೇಷಣೆಗಾಗಿ ವಿಧಿವಿಜ್ಞಾನ ತಜ್ಞರನ್ನು ಕರೆಯಲಾಗಿದೆ. ಬಸ್ ಅನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪಾಂಡೆ ಹೇಳಿದರು.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಜೊತೆಗೆ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಈ ಆಹಾರವನ್ನು ಪ್ರಾಣಿಗಳೂ ತಿನ್ನುವುದಿಲ್ಲ; ಪೊಲೀಸ್ ಮೆಸ್‌ನ​ ಕಳಪೆ ಊಟ ಹಿಡಿದು ರಸ್ತೆಯಲ್ಲಿ ನಿಂತು ಅಳುತ್ತ ಜನರ ಗಮನ ಸೆಳೆದ ಕಾನ್​ಸ್ಟೆಬಲ್ | ವೀಕ್ಷಿಸಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement