ಪ್ರಮೋದ ಮುತಾಲಿಕ್‌, ಯಶಪಾಲ್‌ ತಲೆ ಕಡಿದರೆ 20 ಲಕ್ಷ ರೂ.: ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಬೆದರಿಕೆ..!

posted in: ರಾಜ್ಯ | 0

ಉಡುಪಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹಾಗೂ ಯಶಪಾಲ್‌ ಸುವರ್ಣ ಅವರ ತಲೆ ಕಡಿದರೆ 20 ಲಕ್ಷ ರೂ.ಗಳನ್ನು ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಓಪನ್‌ ಬೆದರಿಕೆ ಹಾಕಿರುವ ಪೋಸ್ಟ್‌ ವೈರಲ್‌ ಆಗಿದೆ. ಈ ಕುರಿತು ಉಡುಪಿಯಲ್ಲಿ ದೂರು ದಾಖಲಾಗಿದೆ.
ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ ರೂ., ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ ಹೀಗೆಂದು ಹಂದಿಗೆ ಹೋಲಿಕೆ ಮಾಡಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಬಂದಿದೆ. 100% ಈ ಎರಡು ತಲೆ ಉರುಳುವುದು ಖಚಿತ ಎಂದು ಮಾರಿಗುಡಿ ಎಂಬ ಪೇಜ್‌ನಲ್ಲಿ ಬೆದರಿಕೆ ಒಡ್ಡಲಾಗಿದೆ.

advertisement

ಉಡುಪಿಯಲ್ಲಿ ಹಿಜಾಬ್ ಸಂಘರ್ಷ ನಡೆದಾಗ ಯಶಪಾಲ್, ಸಿಎಫ್‌ಐ, ವಿದ್ಯಾರ್ಥಿಗಳನ್ನು ಟೆರರಿಸ್ಟ್‌ಗಳು ಎಂದು ಹೇಳಿದ್ದರು. ಕಾನೂನು ಹೋರಾಟದ ನೇತೃತ್ವ ವಹಿಸಿದ್ದರು. ಪ್ರಮೋದ್ ಮುತಾಲಿಕ್ ಹಿಂದೂ ಫೈರ್‌ ಬ್ರ್ಯಾಂಡ್‌ ಆಗಿರುವುದು ಈ ಧಮ್ಕಿಗೆ ಕಾರಣ ಎಂದು ಹೇಳಲಾಗಿದೆ. ಪೇಜ್ ವಿರುದ್ದ ಕಾಪು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಮಾರಿಗುಡಿ ಪೇಜ್ ವಿರುದ್ದ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಓದಿರಿ :-   ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮಾತನಾಡಿ, ಸಾಮಾಜಿಕ ಜಾಲತಾಣಗಳ ಮೂಲಕ ಇಂತಹ ಸಂದೇಶಗಳು, ಕರೆಗಳು ಬರುವುದು ಸಾರ್ವಜನಿಕ ಜೀವನದಲ್ಲಿ ಸರ್ವೇಸಾಮಾನ್ಯ, ನಾವು ರಾಷ್ಟ್ರಕ್ಕಾಗಿ ಕೆಲಸ ಮಾಡುವಾಗ ದೇಶದ್ರೋಹಿಗಳು ಬೆದರಿಕೆ ಹಾಕುತ್ತಾರೆ. ನಾನು ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಇದು ಜೀವನದ ಒಂದು ಭಾಗ, ನಾವು ನಮ್ಮ ಕೆಲಸವನ್ನು ಸಂವಿಧಾನದ ಮಿತಿಯಲ್ಲಿ ಮಾಡುತ್ತಿದ್ದೇವೆ. ನನ್ನ ಮತ್ತು ಪ್ರಮೋದ್ ಮುತಾಲಿಕ್ ಅವರ ಬಗ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಯಾವುದೇ ವ್ಯತ್ಯಾಸವಿಲ್ಲ, ನಾವು ನಮ್ಮ ಹೆಜ್ಜೆಯನ್ನು ಹಿಂದೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ನಾನು Instagram ಪೋಸ್ಟ್ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಆದಾಗ್ಯೂ, ಸಮಸ್ಯೆಯ ಹಿಂದೆ ಇರುವ ಜನರು ಯಾರೆಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದು ಅವರು ಹೇಳಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement