ಶೀಘ್ರವೇ ನೂತನ ಲೋಕಾಯುಕ್ತರ ನೇಮಕ: ಸಿಎಂ ಬೊಮ್ಮಾಯಿ

ಮೈಸೂರು: ನೂತನ ಲೋಕಾಯುಕ್ತರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನ ಪರಿಷತ್ ಚುನಾವಣೆಯ ಪ್ರಚಾರಕ್ಕಾಗಿ ಇಂದು ಮೈಸೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ
ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಾಯುಕ್ತರ ನೇಮಕಾತಗೆ ಸಂಬಂಧಿಸಿದಂತೆ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರವೇ ನೂತನ ಲೋಕಾಯುಕ್ತರನ್ನು ನೇಮಕ ಮಾಡಲಾಗುವುದು. ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ಸೂಚನೆಯಂತೆ ಸರ್ಕಾರ ಲೋಕಾಯುಕ್ತ ನೇಮಕಾತಿ ಪ್ರಕ್ರಿಯೆಯನ್ನು ಅಂತಿಮಗೊಳಿಸಿದೆ ಎಂದು ಮಾಹಿತಿ ನೀಡಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಅನಗತ್ಯ ಖ್ಯಾತೆ ತೆಗೆಯುತ್ತಿದೆ. ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ಉಸ್ತುವಾರಿ ಪ್ರಾಧಿಕಾರಕ್ಕೆ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಚರ್ಚೆ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸರಿಯಲ್ಲ ಎಂದರು.

ಕಾವೇರಿ ಉಸ್ತುವಾರಿ ಪ್ರಾಧಿಕಾರ ಸುಪ್ರೀಂಕೋರ್ಟ್‌ನ ಆದೇಶದಂತೆ ರಚನೆಯಾಗಿದೆ. ನ್ಯಾಯಾಲಯದ ತೀರ್ಪಿನಡಿಯಲ್ಲಿ ಯೋಜನೆಗಳು ಜಾರಿಯಾಗುತ್ತವೆಯೇ ಎಂಬುದನ್ನು ಪರಿಶೀಲಿಸುತ್ತದೆ. ತಮಿಳುನಾಡು ತನ್ನ ವ್ಯಾಪ್ತಿ ಮೀರಿ ಅರ್ಜಿ ಸಲ್ಲಿಸಿದೆ. ಹೀಗೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೊಡುವ ಅಧಿಕಾರ ತಮಿಳುನಾಡಿಗಿಲ್ಲ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಸಭೆಗಳು ನಡೆದಿವೆ. ಸುಪ್ರೀಂಕೋರ್ಟ್‌ಗೆ ಈ ಹಿಂದೆ ಅರ್ಜಿ ಸಲ್ಲಿಸಿದಾಗ ಸುಪ್ರೀಂಕೊರ್ಟ್‌ನ ನೋಟಿಸ್‌ಗೆ ಕರ್ನಾಟಕ ಸಮರ್ಪಕ ಉತ್ತರ ನೀಡಿದೆ ಎಂದರು.
ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ೩ನೇ ಅಭ್ಯರ್ಥಿಯ ಗೆಲುವಿನ ವಿಶ್ವಾಸದಲ್ಲಿದ್ದೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಆಹ್ವಾನಕ್ಕೂ ನಮಗೂ ಸಂಬಂಧವಿಲ್ಲ ಎಂದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement