ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ವರುಣನ ಆರ್ಭಟ, ಬೆಂಗಳೂರು ಸೇರಿ ಕೆಲವೆಡೆ ಇಂದು ಸಾಧಾರಣ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ (ಜೂನ್ 9) ಮೂರು ದಿನಗಳ ವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಜೂನ್ 9ರಿಂದ 11ರ ವರೆಗೆ ಕರಾವಳಿಯಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಇಂದು ಮತ್ತು ನಾಳೆ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಜೂನ್ 9ರಿಂದ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಜೂನ್ 9ರಿಂದ 11ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ,ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ತುಂತುರು ಮಳೆ ಸುರಿಯಲಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement