ನೂತನ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯಗೊಳ್ಳಲಿದ್ದು ನೂತನ ರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಇಂದು, ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ರಂದು ಮತಗಳ ಎಣಿಕೆ ನಡೆಯಲಿದೆ. ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ್‌ ತಿಳಿಸಿದ್ದಾರೆ. ಸಂವಿಧಾನದ 62ನೇ ವಿಧಿ ಪ್ರಕಾರ, ಮುಂದಿನ ರಾಷ್ಟ್ರಪತಿ ಜುಲೈ 25ರೊಳಗೆ ಪ್ರಮಾಣವಚನ ಸ್ವೀಕಾರ ಮಾಡಬೇಕಾಗಿದೆ.

advertisement

ಜೂನ್‌ 15ರಂದು ಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್‌ 29 ಕೊನೆಯ ದಿನವಾಗಲಿದೆ. ಮತದಾನಕ್ಕಾಗಿ ಯಾವುದೇ ರಾಜಕೀಯ ಪಕ್ಷವೂ ಸದಸ್ಯರಿಗೆ ವಿಪ್‌ ಜಾರಿ ಮಾಡುವಂತಿಲ್ಲ. ಮುಂಜಾಗ್ರತಾ ಕ್ರಮವಾಗಿ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳು ಮತದಾನ ಮಾಡಬಹುದು. ಜೈಲಿನಲ್ಲಿರುವವರು ಪರೋಲ್‌ಗೆ ಅರ್ಜಿ ಸಲ್ಲಿಸಬೇಕು ಹಾಗೂ ಅವರಿಗೆ ಪರೋಲ್‌ ಸಿಕ್ಕರೆ ಮತ ಚಲಾಯಿಸಬಹುದು’ ಎಂದು ಅವರು ಹೇಳಿದ್ದಾರೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಭಾಗಿಯಾಗಲಿದ್ದು, ಯಾವುದೇ ಪಕ್ಷ ತನ್ನ ಸಂಸದರು, ಶಾಸಕರಿಗೆ ವಿಪ್ ಜಾರಿ ಮಾಡುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.

ಓದಿರಿ :-   ದಯಾಮರಣಕ್ಕಾಗಿ ಯುರೋಪ್‌ಗೆ ಹೋಗುತ್ತಿರುವ ವ್ಯಕ್ತಿಯನ್ನು ತಡೆಯುವಂತೆ ಕೋರಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕುಟುಂಬದ ಸ್ನೇಹಿತೆ

ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 776 ಸಂಸದರು ಮತ್ತು ಎಲ್ಲ ರಾಜ್ಯಗಳ 4,120 ಶಾಸಕರು ಮತದಾರರಾಗಿರುತ್ತಾರೆ. ಒಟ್ಟು ಮತದಾರರ​​​ ಸಂಖ್ಯೆ 4,896. ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರೊಬ್ಬರ ಮತದ ಮೌಲ್ಯ 708 ಆಗಿರುತ್ತದೆ. ರಾಜ್ಯದ ಜನಸಂಖ್ಯೆಯನ್ನು ಒಟ್ಟು ಶಾಸಕರ ಸಂಖ್ಯೆಯೊಂದಿಗೆ ಭಾಗಿಸಬೇಕು. ಬಳಿಕ ಬರುವ ಶೇಷವನ್ನು ಒಂದು ಸಾವಿರದೊಂದಿಗೆ ಗುಣಿಸಿದಾಗ ಶಾಸಕರ ಮತದ ಮೌಲ್ಯ ಸಿಗುತ್ತದೆ.
ಆದರೆ, ವಿಧಾನಪರಿಷತ್ ಸದಸ್ಯರು, ನಾಮನಿರ್ದೇಶಿತ ಸಂಸದ ಮತ್ತು ಶಾಸಕರಿಗೆ ಮತದಾನದ ಹಕ್ಕು ಇರುವುದಿಲ್ಲ. ರಾಷ್ಟ್ರಪತಿ ಚುನಾವಣೆ ಸಂವಿಧಾನದ ವಿಧಿ 62ರ ಪ್ರಕಾರ ಚುನಾವಣೆ ನಡೆಯಲಿದೆ.
2017ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ರಾಮನಾಥ್ ಕೋವಿಂದ್​ ಶೇ. 65.35ರಷ್ಟು ಮತ​ಗಳಿಸಿ ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement