ಇಂದು ಸಪ್ತಪದಿ ತುಳಿದ ಖ್ಯಾತ ನಟಿ ನಯನತಾರಾ-ವಿಘ್ನೇಶ್ ಶಿವನ್‌

ಚೆನ್ನೈ: ಕಾಲಿವುಡ್‌ ನಟಿ ನಯನತಾರಾ ತಮ್ಮ ಬಹುಕಾಲದ ಗೆಳೆಯ ಚಿತ್ರ ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ಇಂದು, ಗುರುವಾರ ಸಪ್ತಪದಿ ತುಳಿದಿದ್ದಾರೆ.
ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ವಿವಾಹ ಮಹಾಬಲಿಪುರಂ ಖಾಸಗಿ ರೆಸಾರ್ಟ್‌ನಲ್ಲಿ ಅದ್ದೂರಿಯಾಗಿ ನಡೆದಿದ್ದು, ಮದುವೆ ಕಾರ್ಯಕ್ರಮಕ್ಕೆ ಸಿನಿಮಾರಂಗದ ಗಣ್ಯರು ಆಗಮಿಸಿ ವಧುವರರನ್ನು ಹರಸಿದ್ದಾರೆ.

ಸೂಪರ್‌ಸ್ಟಾರ್ ರಜನಿಕಾಂತ್, ಬಾಲಿವುಡ್ ಸ್ಟಾರ್ ಶಾರುಖ್ ಖಾನ್, ನಟರಾದ ವಿಜಯ್ ಸೇತುಪತಿ, ಶರತಕುಮಾರ್, ಕಾರ್ತಿ, ನಿರ್ದೇಶಕ ಮಣಿರತ್ನಂ, ನಿರ್ಮಾಪಕ ಬೋನಿ ಕಪೂರ್, ನಿರ್ದೇಶಕ ಅಟ್ಲಿ ಸೇರಿದಂತೆ ಅನೇಕ ಉನ್ನತ ಅತಿಥಿಗಳು ಭಾಗವಹಿಸಿದ್ದರು ಎಂದು ವರದಿಯಾಗಿದೆ.
ಇನ್ನು 2015ರಲ್ಲಿ ವಿಘ್ನೇಶ್ ನಿರ್ದೇಶನದ ‘ನಾನುಂ ರೌಡಿಧಾನ್’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ನಯನತಾರಾ ಮತ್ತು ವಿಘ್ನೇಶ್ ಶಿವನ್ ನಡುವೆ ಪ್ರೇಮ ಹುಟ್ಟಿಕೊಂಡಿದ್ದು, ಇದೀಗ ಇಂದು ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement