ಕರ್ನಾಟಕದಲ್ಲಿ 500ರ ಸನಿಹ ಬಂದ ದೈನಂದಿನ ಕೊರೊನಾ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಗುರುವಾರ (ಜೂನ್‌ 9) ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ 471 ಮಂದಿಗೆ ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ಸಾವು ವರದಿಯಾಗಿಲ್ಲ.
ಇದೇವೇಳೆ 214 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈಗ 2,880 ಸಕ್ರಿಯ ಪ್ರಕರಣಗಳಿವೆ. ಗುರುವಾರದ ಸಕಾರಾತ್ಮಕ ದರ ರೇಟ್ ಶೇ.1.73ರಷ್ಟು ದಾಖಲಾಗಿದ್ದು, ಬೆಂಗಳೂರಿನಲ್ಲಿ 458 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು ಗ್ರಾಮಾಂತರ -03, ಬೆಂಗಳೂರು ನಗರ -458, ಬೀದರ್ -02, ದ.ಕನ್ನಡ -03, ಧಾರವಾಡ -03, ಕಲಬುರಗಿ -01 ಮತ್ತು ಉಡುಪಿ -01 ಕೊರೊನಾ ಪ್ರಕರಣಗಳು ದಾಖಲಾಗಿವೆ.
51,173 ಮಂದಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದು, ಒಟ್ಟು 21,927 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement