ಇಂದು ಸಪ್ತಪದಿ ತುಳಿದ ಖ್ಯಾತ ನಟಿ ನಯನತಾರಾ-ವಿಘ್ನೇಶ್ ಶಿವನ್‌

ಚೆನ್ನೈ: ಕಾಲಿವುಡ್‌ ನಟಿ ನಯನತಾರಾ ತಮ್ಮ ಬಹುಕಾಲದ ಗೆಳೆಯ ಚಿತ್ರ ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ಇಂದು, ಗುರುವಾರ ಸಪ್ತಪದಿ ತುಳಿದಿದ್ದಾರೆ. ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ವಿವಾಹ ಮಹಾಬಲಿಪುರಂ ಖಾಸಗಿ ರೆಸಾರ್ಟ್‌ನಲ್ಲಿ ಅದ್ದೂರಿಯಾಗಿ ನಡೆದಿದ್ದು, ಮದುವೆ ಕಾರ್ಯಕ್ರಮಕ್ಕೆ ಸಿನಿಮಾರಂಗದ ಗಣ್ಯರು ಆಗಮಿಸಿ ವಧುವರರನ್ನು ಹರಸಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್, ಬಾಲಿವುಡ್ ಸ್ಟಾರ್ ಶಾರುಖ್ … Continued

ರಾಜ್ಯಸಭಾ ಚುನಾವಣೆ: ಮತ ಚಲಾಯಿಸಲು ನವಾಬ್ ಮಲಿಕ್, ಅನಿಲ್ ದೇಶಮುಖ್‌ ಮನವಿ ತಿರಸ್ಕರಿಸಿದ ಮುಂಬೈ ಕೋರ್ಟ್

ಮುಂಬೈ: ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಅನುಮತಿ ಕೋರಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಮತ್ತು ರಾಜ್ಯದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ನ್ಯಾಯಾಲಯ ತಿರಸ್ಕರಿಸಿದೆ. ಕಳೆದ ವರ್ಷ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ದೇಶಮುಖ್ ಅವರನ್ನು ಬಂಧಿಸಲಾಗಿತ್ತು, ಪರಾರಿಯಾಗಿರುವ ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ … Continued

ನೂತನ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯಗೊಳ್ಳಲಿದ್ದು ನೂತನ ರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಇಂದು, ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ರಂದು ಮತಗಳ ಎಣಿಕೆ ನಡೆಯಲಿದೆ. ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ್‌ ತಿಳಿಸಿದ್ದಾರೆ. ಸಂವಿಧಾನದ 62ನೇ ವಿಧಿ ಪ್ರಕಾರ, ಮುಂದಿನ … Continued

ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ..!

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್ ಶಾಸಕರುಗಳಿಗೆ ಸುದೀರ್ಘ ಪತ್ರ ಬರೆದಿದ್ದಾರೆ..! ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್‍ಗೆ ಬೆಂಬಲ ನೀಡುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ, ಭಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ … Continued

ಪಾಕಿಸ್ತಾನದ ಕರಾಚಿಯಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಹಿಂದೂ ದೇವಾಲಯ ಧ್ವಂಸ

ಕರಾಚಿ (ಪಾಕಿಸ್ತಾನ): ಅಲ್ಪಸಂಖ್ಯಾತರ ಆರಾಧನಾ ಸ್ಥಳಗಳ ವಿರುದ್ಧದ ವಿಧ್ವಂಸಕ ಘಟನೆಯಲ್ಲಿ, ಪಾಕಿಸ್ತಾನದ ಕರಾಚಿ ನಗರದ ಹಿಂದೂ ದೇವಾಲಯವನ್ನು ಬುಧವಾರ ಧ್ವಂಸಗೊಳಿಸಲಾಗಿದೆ. ಪೊಲೀಸರ ಪ್ರಕಾರ, ಕರಾಚಿಯ ಕೋರಂಗಿ ಪ್ರದೇಶದಲ್ಲಿ ಶ್ರೀ ಮಾರಿ ಮಾತಾ ಮಂದಿರದಲ್ಲಿ ಇರಿಸಲಾಗಿದ್ದ ವಿಗ್ರಹಗಳನ್ನು ಧ್ವಂಸಗೊಳಿಸಲಾಗಿದೆ. ಈ ದೇವಾಲಯವು ಕೋರಂಗಿ ಪೊಲೀಸ್ ಠಾಣಾ ವ್ಯಾಪ್ತಿಯ “ಜೆ” ಪ್ರದೇಶದಲ್ಲಿದೆ. ಈ ಘಟನೆಯು ಕರಾಚಿಯಲ್ಲಿ ವಾಸಿಸುವ ಹಿಂದೂ … Continued

ಉಪ್ಪಿನಂಗಡಿ ಕಾಲೇಜ್‌: ಹಿಜಾಬ್ ತೆಗೆದಿಟ್ಟು ತರಗತಿಗೆ ಹಾಜರಾದ 46 ಮುಸ್ಲಿಂ ವಿದ್ಯಾರ್ಥಿನಿಯರು

ಮಂಗಳೂರು:ಮಂಗಳೂರು: ಹಿಜಾಬ್ ಧರಿಸಿಯೇ ಕಾಲೇಜ್ ಪ್ರವೇಶಿಸುವುದಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರಲ್ಲಿ 6 ವಿದ್ಯಾರ್ಥಿನಿಯರು ಸಮವಸ್ತ್ರ ನಿಯಮಾಳಿ ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕಾಲೇಜು ತರಗತಿಗೆ ಹಾಜರಾಗಿದ್ದಾರೆ. ಕಾಲೇಜಿನ ಸಮವಸ್ತ್ರ ನಿಯಮಾಳಿಗಳನ್ನು ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟ ನಂತರ ಕಾಲೇಜಿನ ಪ್ರಾಂಶುಪಾಲರು ಇವರಿಗೆ ತರಗತಿಗೆ ಹಾಜರಾಗಲು ಅನುವು ಮಾಡಿಕೊಟ್ಟಿದ್ದಾರೆ. ಹಿಜಾಬ್ … Continued

ರಾಜ್ಯ ಸರ್ಕಾರದಿಂದ ಸಾರ್ವಜನಿಕ ಉದ್ದಿಮೆಗಳ ಇಲಾಖೆ ರದ್ದು ಆದೇಶ

ಬೆಂಗಳೂರು : ಆಡಳಿತ ಸುಧಾರಣೆ ಸಲುವಾಗಿ ಕರ್ನಾಟಕ ಸರ್ಕಾರ ಸಚಿವಾಲದಯದ ಸಾರ್ವಜನಿಕ ಉದ್ದಿಮೆ ಇಲಾಖೆಯನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಇಲಾಖೆಗಳ ವಿಲೀನ, ಕಾಆರ್ಯ ನಿರ್ವಹಣೆಯ ಹಂಚಿಕೆ ಕುರಿತಂತೆ ಅಧ್ಯಯನ ಮಾಡಿ ವರದಿ ನೀಡಲು ರಚನೆಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸಿನ ನಂತರ ಇಲಾಖೆ ರದ್ದು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. … Continued

ಆಳವಾದ ಬೋರ್‌ವೆಲ್‌ನಲ್ಲಿ ಬಿದ್ದಿದ್ದ 2 ವರ್ಷದ ಮಗುವನ್ನು ರಕ್ಷಿಸಲು ಸಹಾಯ ಮಾಡಿದ ಸೇನೆ; ವೀಕ್ಷಿಸಿ

ಸುರೇಂದ್ರನಗರ (ಗುಜರಾತ್): ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯ ಜಮೀನಿನಲ್ಲಿ ಆಳವಾದ ಕೊಳವೆಬಾವಿಯಲ್ಲಿಎರಡು ವರ್ಷದ ಬಾಲಕ ಬಿದ್ದಿದ್ದು, ನಂತರ ಸೇನೆ, ಅಗ್ನಿಶಾಮಕ ದಳ, ಪೊಲೀಸರು ಮತ್ತು ಆರೋಗ್ಯಾಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬಾಲಕ ಶಿವಂ ಎಂದು ಗುರುತಿಸಲಾಗಿದೆ. ಆತನ ಪೋಷಕರು ಕೂಲಿ … Continued

ಪ್ರವಾದಿ ವಿವಾದ: ನೂಪುರ್ ಶರ್ಮಾ, ನವೀನ್ ಜಿಂದಾಲ್, ಸಬಾ ನಖ್ವಿ, ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಪ್ರವಾದಿ ಕುರಿತು ಮಾಡಿದ ವಿವಾದಾತ್ಮಕ ನಡುವೆ ದ್ವೇಷದ ಸಂದೇಶಗಳನ್ನು ಹರಡಿದ ಆರೋಪದಲ್ಲಿ ಅಮಾನತುಗೊಂಡ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ, ಉಚ್ಛಾಟಿತ ಬಿಜೆಪಿ ನಾಯಕ ನವೀನ್ ಜಿಂದಾಲ್ ಮತ್ತು ಪತ್ರಕರ್ತ ಸಾಬಾ ನಖ್ವಿ ಹಾಗೂ ಇತರರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ – ಒಂದು ನೂಪುರ್ ಶರ್ಮಾ … Continued

4ನೇ ಅಲೆ ಮುನ್ಸೂಚನೆ..?: ಒಂದೇ ದಿನದಲ್ಲಿ ಭಾರತದ ದೈನಂದಿನ ಕೋವಿಡ್ ಸೋಂಕಿನಲ್ಲಿ 40% ಏರಿಕೆ; ಹೊಸದಾಗಿ 7,240 ಪ್ರಕರಣಗಳು ದಾಖಲು

ನವದೆಹಲಿ : ದೇಶದಲ್ಲಿ ಕೊರೊನಾ ದೈನಂದಿನ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದಾಖಲಾಗಿದೆ. ದೈನಂದಿನ ಪ್ರಕರಣಗಳು ಸುಮಾರು 40% ಹೆಚ್ಚಳ ದಾಖಲಿಸಿವೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್‌-19 ಕ್ಯಾಸೆಲೋಡ್‌ನಲ್ಲಿ 3,641 ಪ್ರಕರಣಗಳ ಹೆಚ್ಚಳ ದಾಖಲಾಗಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.08 ಪ್ರತಿಶತವನ್ನು … Continued