ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಮೂರು ಅಭ್ಯರ್ಥಿಗಳ ಗೆಲುವು, ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮೂರು ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿಯ ಕರೆಯನ್ನು ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಲು ಬೊಮ್ಮಾಯಿ ಮುಂದಾದರು. ಆದರೆ ಯಡಿಯೂರಪ್ಪ ಅವರು, ನೀವೇ ಮಾತನಾಡಿ ಎಂದು ಬೆನ್ನು ತಟ್ಟಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು … Continued

ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದ ಇಡಿ: ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇಡಿ) ಹೊಸ ದಿನಾಂಕ ನಿಗದಿ ಮಾಡಿದ್ದು ಜೂನ್ 23 ರಂದು ಹಾಜರಾಗಲು ಸೋನಿಯಾ ಗಾಂಧಿಯವರಿಗೆ ಸಮನ್ಸ್ ನೀಡಿದೆ. ಇದಕ್ಕೂ ಮೊದಲು, ಜೂನ್ 8 ಕ್ಕೆ … Continued

ಅಂಗಾಂಗಗಳು ಅಸಮರ್ಪಕವಾಗಿ ಕೆಲಸ ಮಾಡುತ್ತಿದೆ, ಚೇತರಿಕೆ ಅಸಾಧ್ಯ: ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಕುಟುಂಬ

ನವದೆಹಲಿ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಆರೋಗ್ಯ ಹದಗೆಟ್ಟ ನಂತರ ಕಳೆದ ಮೂರು ವಾರಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಅವರ ಕುಟುಂಬ ಶುಕ್ರವಾರ ತಿಳಿಸಿದೆ. ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ತೊಡಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಅಸಮರ್ಪಕವಾಗಿ ಕಾರ್ಯನಿರ್ವಹಿಸುವ ಕಠಿಣ ಹಂತಕ್ಕೆ ಹೋಗಿದ್ದಾರೆ. ಅವರ … Continued

ಕರ್ನಾಟಕದಲ್ಲಿ ಶುಕ್ರವಾರ 500ರ ಗಡಿದಾಟಿದ ದೈನಂದಿನ ಕೊರೊನಾ ಪ್ರಕರಣ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಇಂದು, ಶುಕ್ರವಾರ 525 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ.ರಾಜ್ಯದಲ್ಲಿ ಇಂದು, ಶುಕ್ರವಾರ 228 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಸಾವು ದಾಖಲಾಗಿಲ್ಲ. ಈವರೆಗೆ 39,12,024 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 494 ಪ್ರಕರಣ ದಾಖಲಾಗಿದೆ. ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ 2.31%ಕ್ಕೆ ಏರಿಕೆಯಾಗಿದೆ. 22,673 ಜನರು … Continued

ಕರ್ನಾಟಕ ರಾಜ್ಯಸಭೆ ಚುನಾವಣೆ: ಬಿಜೆಪಿ 3ರಲ್ಲಿ , ಕಾಂಗ್ರೆಸ್‍ಗೆ 1ರಲ್ಲಿ ಗೆಲುವು

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭೆ ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದಿದೆ. ನಿರೀಕ್ಷೆಯಂತೆ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಗೆದ್ದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ಮಾಡಿ ತಂದುಕೊಟ್ಟಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, … Continued

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ: ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ರಾಜ್ಯ ಸರ್ಕಾರ ಮತ್ತೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಕುರಿತು ಖುದ್ದು ಮಾಹಿತಿ ನೀಡಿರುವ ರಾಜ್ಯದ ಆರೋಗ್ಯ ಸಚಿವ ಡಾ.ಕೆ. ಸುಧಾಕರ ಅವರು, ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ ಎಂದು … Continued

ಕೋಲ್ಕತ್ತಾದ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್ ಹೊರಗೆ ಬೇಕಾಬಿಟ್ಟಿ ಗುಂಡು ಹಾರಿಸಿದ ಪೊಲೀಸ್‌, ನಂತರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕೋಲ್ಕತ್ತಾ: ಇಂದು, ಶುಕ್ರವಾರ ಮಧ್ಯಾಹ್ನ ಕೋಲ್ಕತ್ತಾದ ಬಾಂಗ್ಲಾದೇಶ ಹೈಕಮಿಷನ್‌ನ ಹೊರಗೆ ಕೋಲ್ಕತ್ತಾ ಪೊಲೀಸ್ ಸಶಸ್ತ್ರ ಪೊಲೀಸ್ ಪೇದೆಯೊಬ್ಬರು ಗುಂಡಿನ ದಾಳಿ ನಡೆಸಿದ್ದು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ. ಚೋಡುಪ್ ಲೆಪ್ಚಾ ಎಂದು ಗುರುತಿಸಲಾದ ಪೊಲೀಸ್, ಒಂದು ಗಂಟೆ ಕಾಲ ಪ್ರದೇಶದಲ್ಲಿ ಅಡ್ಡಾಡುತ್ತಿದ್ದ ಎಂದು ಹೇಳಲಾಗಿದೆ. ನಂತರ ಇದ್ದಕ್ಕಿದ್ದಂತೆ ಗುಂಡು ಹಾರಿಸಿದ್ದಾನೆ. ನಂತರ ಅವನು ತನ್ನ … Continued

ಹಿಂಸಾಚಾರಕ್ಕೆ ತಿರುಗಿದ ಪ್ರವಾದಿ ಕುರಿತ ಹೇಳಿಕೆಗಳ ವಿರುದ್ಧದ ಪ್ರತಿಭಟನೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ

ಕೋಲ್ಕತ್ತಾ: ಶುಕ್ರವಾರ, ಜೂನ್ 10 ರಂದು ಹೌರಾದ ಉಲುಬೇರಿಯಾ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ ಮತ್ತು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ನಾಯಕರೊಬ್ಬರು ಸುಟ್ಟ ಪಕ್ಷದ ಕಚೇರಿಯ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ ಹಾಗೂ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಗೃಹ-ಪೊಲೀಸ್ ಸಚಿವೆ ಮಮತಾ ಬ್ಯಾನರ್ಜಿ … Continued

ಮಂಗಳೂರು: ಸಾವರ್ಕರ್‌ ಫೋಟೋ ವಿಚಾರದಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ, ಕೆಲವರಿಗೆ ಗಾಯ

ಮಂಗಳೂರು: ತರಗತಿಯಲ್ಲಿ ಸಾವರ್ಕರ್‌ ಫೋಟೋ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ನಡೆದ ಬಗ್ಗೆ ವರದಿಯಾಗಿದೆ. ಮಧ್ಯಾಹ್ನ ಭೋಜನ ವಿರಾಮದ ವೇಳೆ ಈ ಘಟನೆ ನಡೆದಿದ್ದು, ಕೆಲವು ವಿದ್ಯಾರ್ಥಿಗಳು ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊ ಹಾಕಿದ್ದಕ್ಕೆ ಮತ್ತೆ ಕೆಲವರು ಆಕ್ಷೇಪಿಸಿದ್ದಾರೆ. ಇದು … Continued

ರಾಜ್ಯಸಭೆ ಚುನಾವಣೆ: ಬಿಜೆಪಿಯ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಕಾಂಗ್ರೆಸ್ಸಿನನ ಜೈರಾಂ ರಮೇಶ್ ನಿಶ್ಚಿತ-ಅಧಿಕೃತ ಘೋಷಣೆ ಬಾಕಿ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜೈರಾಂ ರಮೇಶ್ ಅವರಿಗೆ ಮೊದಲ ಸುತ್ತಿನ ಪ್ರಾಶಸ್ತ್ಯ ಮತಗಳಲ್ಲಿ ಗೆಲುವು ನಿಶ್ಚಿತ ಎಂದು ಹೇಳಲಾಗಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಸುತ್ತಿನ 46 … Continued