ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳ: ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ರಾಜ್ಯ ಸರ್ಕಾರ ಮತ್ತೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈ ಕುರಿತು ಖುದ್ದು ಮಾಹಿತಿ ನೀಡಿರುವ ರಾಜ್ಯದ ಆರೋಗ್ಯ ಸಚಿವ ಡಾ.ಕೆ. ಸುಧಾಕರ ಅವರು, ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೊಸ ಕೋವಿಡ್ ಮಾರ್ಗಸೂಚಿಯ ಪಟ್ಟಿ ಬಿಡುಗಡೆ ಮಾಡಿರುವ ಡಾ.ಕೆ. ಸುಧಾಕರ್, ರಾಜ್ಯದ ಜನ ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಹೊಸ ಮಾರ್ಗಸೂಚಿಗಳು…

* ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ.
* ಮಾಸ್ಕ್ ಧರಿಸದೇ ಇದ್ದರೇ ಮಾರ್ಷಲ್, ಪೊಲೀಸ್ ಸಿಬ್ಬಂದಿಗೆ ದಂಡ ವಿಧಿಸಲು ಸೂಚನೆ
*ಶಾಪಿಂಗ್ ಮಾಲ್, ಚಿತ್ರಮಂದಿರ, ಹಾಸ್ಟೇಲ್, ಶಿಕ್ಷಣ ಸಂಸ್ಥೆ, ಕಚೇರಿಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ.
*ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ ಬಂದವರಿಗೆ ಮಾತ್ರ ಪ್ರವೇಶ.
*ಸ್ವಂತ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್ ಮತ್ತು ರೈಲುಗಳಲ್ಲೂ ಮಾಸ್ಕ್ ಕಡ್ಡಾಯ
* ಐಎಲ್ಐ ಲಕ್ಷಣಗಳನ್ನು ಹೊಂದಿರುವವರು, ಹೈರಿಸ್ಕ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರೋರು ಆದ್ಯತೆ ಮೇರೆಗೆ ಪರೀಕ್ಷೆ ಒಳಪಡಲು ಸೂಚನೆ
* ಆದ್ಯತೆಯ ಮೇರೆಗೆ ಪರೀಕ್ಷೆಗೆ ಗುರಿಪಡಿಸಲು ಅಗತ್ಯ ಕ್ರಮ.
* ಅರ್ಹರು ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.
*ಹೊಸ ಮಾರ್ಗಸೂಚಿಗಳ ಜಾರಿಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ

ರಾಜ್ಯದಲ್ಲಿ ಕಳೆದ 10 ದಿನಗಳ ಅವಧಿಯಲ್ಲಿ ಕೋವಿಡ್ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಆರೋಗ್ಯ ಇಲಾಖೆ, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸ್ಪಷ್ಟ ಸೂಚನೆ ನೀಡಿದೆ.
ಹೊಸ ಮಾರ್ಗಸೂಚಿಗಳು ಈ ಕೂಡಲೇ ಜಾರಿಯಾಗಲಿದ್ದು, ಜನತೆ ಸಹಕಾರ ನೀಡಬೇಕೆಂದು ರಾಜ್ಯ ಆರೋಗ್ಯ ಇಲಾಖೆ ಮನವಿ ಮಾಡಿದೆ

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement