ಕರ್ನಾಟಕ ರಾಜ್ಯಸಭೆ ಚುನಾವಣೆ: ಬಿಜೆಪಿ 3ರಲ್ಲಿ , ಕಾಂಗ್ರೆಸ್‍ಗೆ 1ರಲ್ಲಿ ಗೆಲುವು

posted in: ರಾಜ್ಯ | 0

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭೆ ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದಿದೆ. ನಿರೀಕ್ಷೆಯಂತೆ ಬಿಜೆಪಿ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕನೇ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್ ಗೆದ್ದಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ ಬಿಜೆಪಿಗೆ ಲಾಭ ಮಾಡಿ ತಂದುಕೊಟ್ಟಿದೆ.

advertisement

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಹಾಗೂ ಕಾಂಗ್ರೆಸ್‌ನಿಂದ ಜೈರಾಂ ರಮೇಶ್ ರಾಜ್ಯಸಭೆಗೆ ಆಯ್ಕೆಯಾಗಿದ್ದು, ಜೆಡಿಎಸ್ ನ ಕುಪೇಂದ್ರ ರೆಡ್ಡಿ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ ಸೋಲು ಅನುಭವಿಸಿದ್ದಾರೆ.
ನಿರ್ಮಲಾ ಸೀತಾರಾಮನ್ 46 ಮತ,ಜಗ್ಗೇಶ್ 44 ಮೊದಲ ಪ್ರಾಶಸ್ತ್ಯದ ಮತ ಪಡೆದು ನಿರೀಕ್ಷಿತ ಗೆಲುವು ಸಾಧಿಸಿದರು. , ಕಾಂಗ್ರೆಸ್ ನಿಂದ ಜೈರಾಂ ರಮೇಶ್ 46 ಮತ ಪಡೆದು ರಾಜ್ಯಸಭೆಗೆ ಆಯ್ಕೆಯಾದರು. ಆದರೆ ಕುತೂಹಲ ಕೆರಳಿಸಿದ್ದ ನಾಲ್ಕನೇ ಸ್ಥಾನಕ್ಕೆ ನಡೆದ ಜಿದ್ದಾಜಿದ್ದಿಯಲ್ಲಿ ಲೆಹರ್ ಸಿಂಗ್ 33 ಮತಗಳನ್ನು ಪಡೆದು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಜೆಡಿಎಸ್ ನ ಕುಪೇಂದ್ರ ರೆಡ್ಡಿ 30 ಮತ ಮತ್ತು ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್ 25 ಮತ ಪಡೆದು ಸೋಲು ಅನುಭವಿಸಿದ್ದಾರೆ.
ಜೆಡಿಎಸ್ ಮಣಿಸುವ ಹಠಕ್ಕೆ ಬಿದ್ದು ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನ್ಸೂರ್ ಖಾನ್ ಗೆಲ್ಲಿಸಿಕೊಳ್ಳಲಾಗದೇ ಹಿನ್ನಡೆ ಅನುಭವಿಸಿದರೂ ಜೆಡಿಎಸ್‌ ಕೂಡ ಸೋಲನುಭವಿಸಿದೆ.

ಓದಿರಿ :-   'ಅಸಾಧಾರಣ' ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

 

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement