ಕೋಲ್ಕತ್ತಾದ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್ ಹೊರಗೆ ಬೇಕಾಬಿಟ್ಟಿ ಗುಂಡು ಹಾರಿಸಿದ ಪೊಲೀಸ್‌, ನಂತರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕೋಲ್ಕತ್ತಾ: ಇಂದು, ಶುಕ್ರವಾರ ಮಧ್ಯಾಹ್ನ ಕೋಲ್ಕತ್ತಾದ ಬಾಂಗ್ಲಾದೇಶ ಹೈಕಮಿಷನ್‌ನ ಹೊರಗೆ ಕೋಲ್ಕತ್ತಾ ಪೊಲೀಸ್ ಸಶಸ್ತ್ರ ಪೊಲೀಸ್ ಪೇದೆಯೊಬ್ಬರು ಗುಂಡಿನ ದಾಳಿ ನಡೆಸಿದ್ದು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ.
ಚೋಡುಪ್ ಲೆಪ್ಚಾ ಎಂದು ಗುರುತಿಸಲಾದ ಪೊಲೀಸ್, ಒಂದು ಗಂಟೆ ಕಾಲ ಪ್ರದೇಶದಲ್ಲಿ ಅಡ್ಡಾಡುತ್ತಿದ್ದ ಎಂದು ಹೇಳಲಾಗಿದೆ.

advertisement

ನಂತರ ಇದ್ದಕ್ಕಿದ್ದಂತೆ ಗುಂಡು ಹಾರಿಸಿದ್ದಾನೆ. ನಂತರ ಅವನು ತನ್ನ ಮೇಲೆ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ಟಿವಿ ವರದಿ ಮಾಡಿದೆ. ಸ್ವಯಂ-ಲೋಡಿಂಗ್ ರೈಫಲ್‌ನಿಂದ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ.
ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದ ಮಹಿಳೆ ಬುಲೆಟ್ ತಗುಲಿ ಕೆಳಗೆ ಬಿದ್ದಳು. ಮಹಿಳೆ ಸ್ಥಳದಲ್ಲೇ ಸಾವಿಗೀಡಾದರು. ಪೊಲೀಸರು ಕೆಲವು ಸುತ್ತು ಗುಂಡು ಹಾರಿಸಿದ ನಂತರ ಪೊಲೀಸ್‌ ತನ್ನ ತಲೆಗೆ ಗುಂಡು ಹಾರಿಸಿಕೊಂಡ ಎಂದು ಹೇಳಲಾಗಿದೆ.
ಕೋಲ್ಕತ್ತಾ ಪೊಲೀಸ್ ಸಶಸ್ತ್ರ ಪೊಲೀಸರ 5 ನೇ ಬೆಟಾಲಿಯನ್‌ನಿಂದ ಲೆಪ್ಚಾ ಅವರನ್ನು ಬಾಂಗ್ಲಾದೇಶ ಹೈಕಮಿಷನ್‌ಗೆ ನಿಯೋಜಿಸಲಾಗಿದೆ. ರಜೆಯಲ್ಲಿದ್ದ ಆತ ಇಂದು ಬೆಳಗ್ಗೆ ಕರ್ತವ್ಯಕ್ಕೆ ಮರಳಿದ್ದ. ಖಿನ್ನತೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.

ಓದಿರಿ :-   ಮದ್ಯದ ನೀತಿ : ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ, 20 ಸ್ಥಳಗಳಲ್ಲಿ ಶೋಧ

.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement