ಮಂಗಳೂರು: ಸಾವರ್ಕರ್‌ ಫೋಟೋ ವಿಚಾರದಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ, ಕೆಲವರಿಗೆ ಗಾಯ

posted in: ರಾಜ್ಯ | 0

ಮಂಗಳೂರು: ತರಗತಿಯಲ್ಲಿ ಸಾವರ್ಕರ್‌ ಫೋಟೋ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ನಡೆದ ಬಗ್ಗೆ ವರದಿಯಾಗಿದೆ.
ಮಧ್ಯಾಹ್ನ ಭೋಜನ ವಿರಾಮದ ವೇಳೆ ಈ ಘಟನೆ ನಡೆದಿದ್ದು, ಕೆಲವು ವಿದ್ಯಾರ್ಥಿಗಳು ಕೆಲ ದಿನ ಹಿಂದೆ ತರಗತಿಯಲ್ಲಿ ಸಾವರ್ಕರ್ ಫೊಟೊ ಹಾಕಿದ್ದಕ್ಕೆ ಮತ್ತೆ ಕೆಲವರು ಆಕ್ಷೇಪಿಸಿದ್ದಾರೆ. ಇದು ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಮಾತಿಗೆ ಮಾತು ಬೆಳೆದಿದ್ದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಈ ವೇಳೆ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಮೂರ್ನಾಲ್ಕು ದಿನಗಳ ಹಿಂದೆ ಹಂಪನಕಟ್ಟೆಯ ವಿವಿ ಕಾಲೇಜಿನ ಕೊಠಡಿಯಲ್ಲಿ ಬೋರ್ಡ್ ಮೇಲೆ ಸಾವರ್ಕರ್ ಫೋಟೋ ಅನ್ನು ವಿದ್ಯಾರ್ಥಿಯೊಬ್ಬ ಹಾಕಿದ್ದ ವೀಡಿಯೋ ವೈರಲ್ ಆಗಿತ್ತು. ಇದು ಗಮನಕ್ಕೆ ಬಂದ ತಕ್ಷಣ ಪ್ರಾಂಶುಪಾಲರಾದ ಅನುಸೂಯ ಅವರು ಫೋಟೋ ತೆಗೆದಿದ್ದರು. ಈ ವಿಚಾರದಲ್ಲಿ ಮಧ್ಯಾಹ್ನ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ವಾದ-ವಿವಾದ ಆರಂಭವಾಗಿ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ನಿಮ್ಮ ಕಾಮೆಂಟ್ ಬರೆಯಿರಿ