ಮೂರು ತಿಂಗಳ ಬಳಿಕ ಭಾರತದಲ್ಲಿ ಹೊಸದಾಗಿ 7,584 ಕೊರೊನಾ ಸೋಂಕು ದಾಖಲು…!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,584 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೂರು ತಿಂಗಳ ಬಳಿಕ ಅತಿ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾದಂತಾಗಿದೆ. ಕಳೆದ ಮೂರು ತಿಂಗಳಿನಿಂದ ಪ್ರತಿನಿತ್ಯ 3 ಸಾವಿರ ಆಸು-ಪಾಸಿನಲ್ಲಿ ಪ್ರಕರಣಗಳು ವರದಿಯಾಗುತ್ತಿದ್ದು. ಈಗ ದಿಢೀರ್ ಏರಿಕೆ ಕಂಡಿದೆ.

ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾದಿಂದ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4,32,05,106 ಕ್ಕೆ ಹಾಗೂ ಮೃತರ ಸಂಖ್ಯೆ 5,24,747 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನದಲ್ಲಿ 3,791 ಜನರು ವೈರಸ್​ನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,26,44,092 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯ 36,267 ಕೋವಿಡ್​ ಸಕ್ರಿಯ ಪ್ರಕರಣಗಳಿವೆ ,ದೈನಂದಿನ ಪಾಸಿಟಿವಿಟಿ ರೇಟ್​ 2.26 ಪ್ರತಿಶತದಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಪತ್ತೆಯಾದ 7,584 ಹೊಸ ಕೋವಿಡ್ ಪ್ರಕರಣಗಳ ಪೈಕಿ ಮಹಾರಾಷ್ಟ್ರದಲ್ಲೇ 2,813 ಪ್ರಕರಣಗಳು ಹಾಗೂ ಕೇರಳದಲ್ಲಿ 2,193 ಕೇಸ್​ಗಳು ವರದಿಯಾಗಿವೆ. ಕರ್ನಾಟಕದಲ್ಲಿ 471 ಪ್ರಕರಣಗಳು ಪತ್ತೆಯಾಗಿದ್ದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 622 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement