ಮಂಡ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಪಾಗಲ್ ಪ್ರೇಮಿಯನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ಕೊಟ್ಟ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಪ್ಯಾರಾ ಮೆಡಿಕಲ್ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಆರೋಪಿ ಸಂಪತಕುಮಾರ್ ಎಂಬಾತ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ.
ಸಂತ್ರಸ್ತೆ ಮತ್ತು ಸಂಪತ್ ಕುಮಾರ್ ಇಬ್ಬರು ಒಂದೇ ಗ್ರಾಮದವರು. ಎರಡು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ-ಪ್ರೇಮ ಬಿಟ್ಟು ಓದಿನ ಕಡೆ ಗಮನ ನೀಡುವಂತೆ ತಂದೆ ಸಲಹೆ ನೀಡಿದ ನಂತರ ವಿದ್ಯಾರ್ಥಿನಿಯು ಸಂಪತಕುಮಾರ್ ಜತೆ ಅಂತರ ಕಾಯ್ದುಕೊಂಡಿದ್ದಳು ಎನ್ನಲಾಗಿದೆ. ಆಇದರೀಮದ ಕೋಪಗೊಂಡಿದ್ದ ಸಂಪತಕುಮಾರ ವಿದ್ಯಾರ್ಥಿನಿ ಮನೆಗೆ ಹೋಗಿ ಮದುವೆ ಮಾಡಿಕೊಂಡುವಂತೆ ಗಲಾಟೆ ಸಹ ಮಾಡಿದ್ದ ಹಾಗೂ ಮದುವೆ ಮಾಡಿಕೊಡದಿದ್ದರೆ ಇಬ್ಬರು ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಗುರುವಾರ ಬೆಳಗ್ಗೆ ಕಾಲೇಜು ಬಳಿ ಬಂದಿದ್ದ ಸಂಪತ್, ಸಂಜೆ ಕಾಲೇಜಿನಿಂದ ಸಂತ್ರಸ್ತೆ, ಹೊರಗೆ ಬರುತ್ತಿದ್ದಂತೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಾರಿಯಾಗಲು ಯತ್ನಿಸಿದ ಸಂಪತ್ನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿ, ಪೊಲೀಸರ ವಶಕ್ಕೆ ನೀಡಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ