ಇಂದಿನಿಂದ ನಾಲ್ಕು ದಿನ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಶುರುವಾಗಿದ್ದು, ಇಂದಿನಿಂದ ಇನ್ನೂ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಇಂದಿನಿಂದ ಜೂನ್ 14ರ ವರೆಗೆ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜೂನ್ 14 ರವರೆಗೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement